ಮಂಡ್ಯ, 24 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮಂಡ್ಯದ ಗುರುಭವನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಶಿಕ್ಷಕ ಪ್ರತಿನಿಧಿಗಳ ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ 2024 ಮತ್ತು 2025 ನೇ ಸಾಲಿನ SSLC ಪರೀಕ್ಷೆಯಲ್ಲಿ 625/625 ಅಂಕ ಗಳಿಸಿದ ವಿದ್ಯಾರ್ಥಿನಿಯರಾದ ಧೃತಿ, ಪುನೀತ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 90 ಕ್ಕೂ ಹೆಚ್ಚಿನ ಅಂಕ ಗಳಿಸಿ ನೀಟ್ ಪರೀಕ್ಷೆಯಲ್ಲಿ ಉತ್ತಿರ್ಣರಾದ ಚೇತನ್ ಅವರನ್ನು ಸನ್ಮಾನಿಸಲಾಯಿತು. ಹಾಗೂ ನೂತನವಾಗಿ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನುಗ್ಲಿ ಹಾಗೂ ಕಾರ್ಯದರ್ಶಿಗಳಾದ ಚೇತನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಪಿ. ರವಿಕುಮಾರ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗೇಶ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa