ರಾಯಚೂರು, 24 ಆಗಸ್ಟ್ (ಹಿ.ಸ.) :
ಆ್ಯಂಕರ್ : ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವ ಮೂಲಕ ದೇಶದ ಸಂಸ್ಕೃತಿ ಕಾಪಾಡುವಲ್ಲಿ ಮಠ-ಮಾನ್ಯಗಳ ಪಾತ್ರ ದೊಡ್ಡದಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್. ಎಸ್. ಬೋಸರಾಜು ಅವರು ತಿಳಿಸಿದರು.
ಸೋಮವಾರಪೇಟೆ ಹಿರೇಮಠದಲ್ಲಿ ಶ್ರಾವಣ ಮಾಸದ ನಿಮಿತ್ಯ ಶ್ರೀ ಅಲ್ಲಿಪೂರು ಶ್ರೀ ಸದ್ಗುರು ಮಹಾಯೋಗಿ ಮಹದೇವ ತಾತನವರ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅನ್ನ ದಾಸೋಹ, ಶಿಕ್ಷಣ ದಾಸೋಹ ಸೇರಿದಂತೆ ನಾಡು ನುಡಿಯ ಧಾರ್ಮಿಕ ಸಂಸ್ಕೃತಿ ಉಳಿಸಿ, ಬೆಳೆಸುವಲ್ಲಿ ಮಠಗಳ ಸೇವೆ ಕಾರ್ಯ ಶ್ಲಾಘನೀಯವಾಗಿದೆ ಎಂದು ತಿಳಿಸಿದರು.
ಶ್ರೀಗಳಾದ ಅಭಿನವ ಶ್ರೀ ರಾಚೋಟಿ ವೀರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಸನ್ಮಾನಿಸಿ ಆಶೀರ್ವಾದ ಪಡೆದರು ನಂತರ ಶ್ರೀಗಳು ಸಚಿವರಿಗೆ ಸನ್ಮಾನಿಸಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಬಸವಾಚಾರ್ಯ ಸ್ವಾಮಿಗಳು, ಮಾಜಿ ಶಾಸಕರಾದ ಎ ಪಾಪರಡ್ಡಿ, ಕಾಂಗ್ರೆಸ್ ಮುಖಂಡರಾ ದ ಜಯಣ್ಣ, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್