ಗದಗ, 24 ಆಗಸ್ಟ್ (ಹಿ.ಸ.) :
ಆ್ಯಂಕರ್ : ಲಕ್ಷ್ಮೇಶ್ವರ ಪಟ್ಟಣದ ಅಕ್ಕಮಹಾದೇವಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ನಡೆದ ‘ಶ್ರಾವಣ ಸಂಜೆ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಮಕ್ಕಳನ್ನು ಟಿವಿ, ಮೊಬೈಲ್‌ಗಳಿಂದ ದೂರವಿರಿಸಿ, ಪುರಾಣ-ಪ್ರವಚನ, ಸತ್ಸಂಗ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರೇರೇಪಿಸಬೇಕು. ರಾಮಾಯಣ, ಮಹಾಭಾರತ, ಭಗವದ್ಗೀತೆಗಳನ್ನು ಓದುವಂತಹ ವಾತಾವರಣವನ್ನು ಪೋಷಕರು ಮನೆಯಲ್ಲಿ ನಿರ್ಮಿಸಬೇಕು” ಎಂದು ಸಲಹೆ ನೀಡಿದರು.
ಪ್ರೊ. ಎಸ್.ವಿ. ಸಜ್ಜನಶೆಟ್ಟರವರು ‘ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ, ಶರಣರ ವಚನಗಳ ಮೂಲಕ ಸಮಾಜ ಸುಧಾರಣೆ ಹಾಗೂ ಮಾನವೀಯ ಮೌಲ್ಯಗಳ ಪ್ರಚಾರ ನಡೆದಿರುವುದನ್ನು ವಿವರಿಸಿದರು.
ಬಸವಣ್ಣ, ಅಕ್ಕಮಹಾದೇವಿ, ಮುಕ್ತಾಯಕ್ಕ ಸೇರಿದಂತೆ ಅನೇಕ ಶರಣರ ವಚನಗಳು ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದವು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು, “ತಾಂತ್ರಿಕತೆಯ ಪ್ರಭಾವದ ನಡುವೆಯೂ ನಮ್ಮ ಸಂಪ್ರದಾಯ, ಸಂಸ್ಕೃತಿ, ಆಚಾರ-ವಿಚಾರಗಳನ್ನು ಉಳಿಸುವುದು ಅವಶ್ಯ. ಪ್ರತಿವರ್ಷ ಶ್ರಾವಣ ಮಾಸದಲ್ಲಿ ಧಾರ್ಮಿಕ ಹಾಗೂ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ಶ್ರಮಿಸುತ್ತಿರುವ ಅಕ್ಕನ ಬಳಗದ ಕಾರ್ಯ ಶ್ಲಾಘನೀಯ” ಎಂದರು.
ಕಾರ್ಯಕ್ರಮಕ್ಕೆ ಎಸ್.ಎಸ್. ನಾಗಲೋಟಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ನಾಗಭೂಷಣ ಪವಾಡಶೆಟ್ರ, ಪರಮೇಶ್ವರಪ್ಪ ಬಂಕಾಪೂರ, ಎಂ.ಪಿ. ಹುಬ್ಬಳ್ಳಿ, ಕಿರಣ ನಾಲ್ವಾಡ, ಜಿ.ಎಸ್. ರಾಮಶೆಟ್ಟರ, ಎಲ್.ಎಸ್. ಅರಳಹಳ್ಳಿ, ಶೋಭಾ ಗಾಂಜಿ, ಮಧುಮತಿ ಹತ್ತಿಕಾಳ, ನಿರ್ಮಲಾ ಅರಳಿ, ರತ್ನಾ ಕರ್ಕಿ, ಲಲಿತಕ್ಕ ಕೆರಿಮನಿ, ಪ್ರತಿಮಾ ಮಹಾಜನಶೆಟ್ಟರ, ಗಂಗಾಧರ ಅರಳಿ, ನಿಂಗಪ್ಪ ಗೊರವರ, ಮಲ್ಲು ಕಳಸಾಪುರ ಸೇರಿದಂತೆ ಅನೇಕರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP