ವಿಜಯಪುರ, 24 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಾಹನ ಓವರ್ ಟೇಕ್ ಮಾಡಲು ಹೋಗಿ ಕೆ ಎಸ್ ಆರ್ ಟಿ ಸಿ ಬಸ್ ಗೆ ಇನ್ನೋವಾ ಕಾರು ಡಿಕ್ಕಿ ಆಗಿಯಾದ ಪರಿಣಾಮ ಇನ್ನೋವಾ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಬಳಿ ಹುಬ್ಬಳ್ಳಿ -ವಿಜಯಪುರ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.
ಬಸ್ ಎದುರಿನ ಗಾಜು ಜಖಂ ಆಗಿ ಕಾರು
ನುಜ್ಜುಗುಜ್ಜಾಗಿದೆ. ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸ್ಥಳಕ್ಕೆ ಕೆರೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮೃತರ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande