ಬೆಂಗಳೂರು, 24 ಆಗಸ್ಟ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ಪ್ರಕರಣದಲ್ಲಿ ಮುಸುಕುದಾರಿ ಚಿನ್ನಯ್ಯನ ಬಂಧನದ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಪ್ರತಿಕ್ರಿಯಿಸಿದ್ದು ಅನಾಮಿಕ ವ್ಯಕ್ತಿಯ ಹಿಂದೆ ಯಾರಿದ್ದಾರೆ ಎಂಬುದು ಹೊರಬರುತ್ತದೆ. ಸರ್ಕಾರ ಎಸ್ಐಟಿ ರಚಿಸಿ ತನಿಖೆ ನಡೆಸಿದೆ. ಸತ್ಯಾಂಶ ಏನೇ ಇದ್ದರೂ ಬಹಿರಂಗವಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಕ್ಷೇತ್ರ ಹಾಗೂ ಧರ್ಮಾಧಿಕಾರಿಗಳ ಬಗ್ಗೆ ಚರ್ಚೆಗಳು ವರ್ಷಗಳಿಂದ ನಡೆಯುತ್ತಿವೆ. ಯೂಟ್ಯೂಬರ್‌ಗಳೂ ಮಾತನಾಡುತ್ತಿದ್ದರು. ಎಲ್ಲರೂ ಧರ್ಮಕ್ಕೆ ಸೇರಿದವರೇ. ಬಿಜೆಪಿ ಧರ್ಮರಕ್ಷಣೆ ಬಗ್ಗೆ ಕೂಗುತ್ತಿದ್ದಾರೆ. ಆದರೆ ನಾಲ್ಕು ವರ್ಷ ನಿಮ್ಮದೇ ಸರ್ಕಾರ ಇತ್ತು. ಆಗ ಗೃಹ ಸಚಿವರಾಗಿ ಅರಗ ಜ್ಞಾನೇಂದ್ರ, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇದ್ದರು. ಆಗ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಏನೂ ಮಾಡಲಿಲ್ಲ. ಈಗ ನಮ್ಮ ಸರ್ಕಾರ ಎಸ್ಐಟಿ ಮೂಲಕ ಕ್ರಮ ಕೈಗೊಂಡಿದೆ. ಇದನ್ನು ಬಿಜೆಪಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಟೀಕಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa