ವಿಶೇಷಚೇತನರ ಕಲ್ಯಾಣ ಇಲಾಖೆ : ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
ಬಳ್ಳಾರಿ, 25 ಆಗಸ್ಟ್ (ಹಿ.ಸ.) : ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಎಸ್.ಎಸ್.ಎಲ್.ಸಿ ನಂತರ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಆಫ್‍ಲೈನ್ ಮೂಳಕ ಅರ್ಜಿ ಆಹ್ವಾನಿಸಲಾಗಿದೆ. ಉನ್ನತ ಶಿಕ್ಷಣ
ವಿಶೇಷಚೇತನರ ಕಲ್ಯಾಣ ಇಲಾಖೆ : ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ


ಬಳ್ಳಾರಿ, 25 ಆಗಸ್ಟ್ (ಹಿ.ಸ.) :

ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಎಸ್.ಎಸ್.ಎಲ್.ಸಿ ನಂತರ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಆಫ್‍ಲೈನ್ ಮೂಳಕ ಅರ್ಜಿ ಆಹ್ವಾನಿಸಲಾಗಿದೆ.

ಉನ್ನತ ಶಿಕ್ಷಣ ಪಡೆಯುವ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರಸ್ತಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ನಾತಕೋತ್ತರ ಮತ್ತು ಔದ್ಯೋಗಿಕ ಶಿಕ್ಷಣಗಳಿಗೆ ನಿಯಮಾನುಸಾರ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಸರ್ಕಾರವು ನಿಗದಿಪಡಿಸಿರುವ ಪರೀಕ್ಷಾ ಶುಲ್ಕ, ಬೋಧನಾ ಶುಲ್ಕ, ಪ್ರಯೋಗಾಲಯ ಶುಲ್ಕ, ಕ್ರೀಡಾ ಶುಲ್ಕ ಹಾಗೂ ಗ್ರಂಥಾಲಯ ಶುಲ್ಕಗಳನ್ನು ಮರುಪಾವತಿಸಲು ಸರ್ಕಾರವು ಆದೇಶಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಎಂಆರ್‍ಡಬ್ಲ್ಯೂ ಗಳಾದ ಬಳ್ಳಾರಿ, ಕಂಪ್ಲಿ-8880875620, ಕುರುಗೋಡು-9538000887, ಸಿರುಗುಪ್ಪ-9743509698, ಸಂಡೂರು-9632052270 ಅಥವಾ ನಗರದ ಕಂಟೋನ್ ಮೆಂಟ್ ನ ಶಾಂತಿಧಾಮ ಆವರಣದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande