ಬಳ್ಳಾರಿ, 25 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26ನೇ ಸಾಲಿಗೆ ನಾನಾ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಅಥವಾ ನೇರವಾಗಿ ಆನ್‍ಲೈನ್ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/sevasindhu/kannada ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಫಲಾನುಭವಿ ಆಧಾರಿತ ಯೋಜನೆಗಳು:
ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ನಿರುದ್ಯೋಗ ಭತ್ಯೆ, ಪ್ರತಿಭೆ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶಿಶುಪಾಲನಾ ಭತ್ಯೆ, ಯಂತ್ರಚಾಲಿತ ತ್ರಿಚಕ್ರ ವಾಹನ, ಬ್ಯಾಟರಿ ಚಾಲಿತ ವ್ಹೀಲ್ ಚೇರ್, ಹೊಲಿಗೆ ಯಂತ್ರ, ಬ್ರೈಲ್ ಕಿಟ್, ಟಾಕಿಂಗ್ ಲ್ಯಾಪ್ ಟ್ಯಾಪ್ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ಜೆರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಶಾಂತಿಧಾಮ ಆವರಣ, ಕಂಟೋನ್ ಮೆಂಟ್, ಬಳ್ಳಾರಿ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು: ಬಳ್ಳಾರಿ, ಕಂಪ್ಲಿ-8880875620, ಸಿರುಗುಪ್ಪ-9743509698, ಸಂಡೂರು-9632052270, ಕುರುಗೋಡು-9538000887 ಅಥವಾ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ ಹಾಗೂ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್