ಲಕ್ನೋ, 25 ಆಗಸ್ಟ್ (ಹಿ.ಸ.) :
ಆ್ಯಂಕರ್ : ಆಕ್ಸಿಯಮ್ ಮಿಷನ್–4 ರ ಮಿಷನ್ ಪೈಲಟ್ ಆಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಿದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ತವರು ರಾಜ್ಯ ಲಕ್ನೋದಲ್ಲಿ ಭವ್ಯ ಸ್ವಾಗತ ನೀಡಲಾಯಿತು.
ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಮತ್ತು ಮೇಯರ್ ಸುಷ್ಮಾ ಖಾರ್ಕ್ವಾಲ್ ಅವರು ಅವರನ್ನು ಸ್ವಾಗತಿಸಿದರು. ಮಳೆಯನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ರಸ್ತೆ ಬದಿಯಲ್ಲಿ ನಿಂತು ಉತ್ಸಾಹಭರಿತ ಸ್ವಾಗತ ನೀಡಿದರು.
ಸಿಎಂಎಸ್ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಶುಭಾಂಶು ಶುಕ್ಲಾ, “ನಾನು ನಿಮ್ಮಷ್ಟು ಪ್ರತಿಭಾನ್ವಿತನಲ್ಲ, ಆದರೆ ನಿಮಗೆ ಭವಿಷ್ಯದಲ್ಲಿ ಅಪಾರ ಅವಕಾಶಗಳಿವೆ” ಎಂದು ಪ್ರೇರೇಪಿಸಿದರು. “ಸರಿಯಾದ ಸಮಯದಲ್ಲಿ ಸರಿಯಾದ ಅವಕಾಶ ಸಿಕ್ಕಿದ ಕಾರಣ ನನಗೆ ಈ ಸಾಧನೆ ಸಾಧ್ಯವಾಯಿತು. ಲಕ್ನೋ ನನ್ನ ಮನೆ, ಇಲ್ಲಿಗೆ ಮರಳಿರುವುದು ನನಗೆ ಅಪಾರ ಸಂತೋಷ ತಂದಿದೆ ಎಂದರು.
ಉಪಮುಖ್ಯಮಂತ್ರಿ ಪಾಠಕ್ ಮಾತನಾಡಿ “ಶುಭಾಂಶು ಶುಕ್ಲಾ ಅವರು ಯುವ ಪೀಳಿಗೆಗೆ ಶಾಶ್ವತ ಸ್ಫೂರ್ತಿಯಾಗಿದ್ದಾರೆ. ಇಡೀ ವಿಶ್ವದಲ್ಲಿ ಭಾರತೀಯರಿಗೆ ಹೆಮ್ಮೆಯ ಕ್ಷಣವನ್ನು ತಂದಿದ್ದಾರೆ” ಎಂದು ಶ್ಲಾಘಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa