ಬಳ್ಳಾರಿ, 25 ಆಗಸ್ಟ್ (ಹಿ.ಸ.) :
ಆ್ಯಂಕರ್ : ಆರೋಗ್ಯವಂತರು ಯಾವುದೇ ಆತಂಕವಿಲ್ಲದೆ ಪ್ರತಿ ಮೂರು ತಿಂಗಳಿಗೆ ಒಮ್ಮೆ ರಕ್ತದಾನ ಮಾಡಬಹುದಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸರೆಡ್ಡಿ .ಎನ್ ಅವರು ತಿಳಿಸಿದ್ದಾರೆ.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ರಾಜಯೋಗಿನಿ ದಾದಿ ಪ್ರಕಾಶಮಣಿ ಅವರ ಪವಿತ್ರ ಆತ್ಮದ ಸ್ಮರಣಾರ್ಥ ಸೋಮವಾರ ಹಮ್ಮಿಕೊಂಡಿದ್ದ `ಬೃಹತ್ ರಕ್ತದಾನ ಅಭಿಯಾನ-2025'ಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
ರಕ್ತದಾನ ಮಾಡುವುದರಿಂದ ಯಾರಿಗೂ ಯಾವುದೇ ರೀತಿಯಲ್ಲಿ ಆರೋಗ್ಯಕ್ಕೆ ಧಕ್ಕೆ ಆಗುವುದಿಲ್ಲ. ಒಮ್ಮೆ ರಕ್ತದಾನ ಮಾಡಿದ ನಂತರ ಹೊಸ ರಕ್ತಕಣಗಳು ಸೃಷ್ಟಿಯಾಗಿ ಆರೋಗ್ಯ ಸದಾಕಾಲ ಉತ್ತಮವಾಗಿದ್ದು, ರಕ್ತದಾನಿಯು ಸದಾಕಾಲ ಲವಲವಿಕೆಯಿಂದ - ಆರೋಗ್ಯದಿಂದ ಇರಲು ಸಾಧ್ಯವಾಗುತ್ತದೆ ಎಂದರು.
ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ, ಪಾಲಿಕೆ ಸದಸ್ಯ ಮೋತ್ಕರ್ ಶ್ರೀನಿವಾಸ್, ಡಾ. ಅರುಣ ಕಾಮಿನೇನಿ, ಮೇದಾ ಕಾಲೇಜಿನ ಅಧ್ಯಕ್ಷರಾದ ರಾಂ ಕಿರಣ್, ಬ್ರಹ್ಮಕುಮಾರಿ ನಿರ್ಮಲಾ ಜೀ ಅವರು ವೇದಿಕೆಯಲ್ಲಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್