ರಾಯಚೂರು, 25 ಆಗಸ್ಟ್ (ಹಿ.ಸ.) :
ಆ್ಯಂಕರ್ : ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಎಮ್.ಎಮ್ ಕಾಲೋನಿಯ ನಿವಾಸಿಯಾದ ಎಸ್.ಕೆ.ಪೀರ್ ತಂದೆ ಅಬ್ದುಲ್ ಖಾದರ್ (58) ಕಾಣೆಯಾಗಿದ್ದು, ಈ ಕುರಿತು ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ: 38/2025 ಕಲಂ ವ್ಯಕ್ತಿ ಕಾಣೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯ ಚಹರೆ: ಸಧೃಡ ಮೈಕಟ್ಟು, ಕೆಂಪು ಮೈ ಬಣ್ಣ, ತಲೆಯಲ್ಲಿ ಕಪ್ಪು ಕೂದಲು 5.6 ಅಡಿ ಎತ್ತರ, ಬಿಳಿ ಬಣ್ಣದ ಅಂಗಿ ಮತ್ತು ಲುಂಗಿ ಧರಿಸಲಾಗಿದ್ದು, ಕನ್ನಡ, ಉರ್ದು, ಹಿಂದಿ ಹಾಗೂ ತೆಲುಗು ಭಾಷೆ ಮಾತನಾಡುತ್ತಾನೆ.
ಈ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಸದರ್ ಬಜಾರ್ ಪೊಲೀಸ್ ಠಾಣೆ ದೊರವಾಣಿ ಸಂಖ್ಯೆ:08532-226148, ಸದರ್ ಬಜಾರ್ ಪೊಲೀಸ್ ಠಾಣೆಯ ಅರಕ್ಷಕ ನಿರೀಕ್ಷಕರ ದೂರವಾಣಿ ಸಂಖ್ಯೆ:9480803830, ಅಥವಾ ರಾಯಚೂರು ನಗರ ಪೊಲೀಸ್ ಕಂಟ್ರೋಲ್ ರೂಂ: 9480803830ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಸದರ್ ಬಜಾರ್ ಪೊಲೀಸ್ ಠಾಣೆಯ ಅರಕ್ಷಕ ನಿರೀಕ್ಷಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್