ಬೆಂಗಳೂರು, 25 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ಘೋಷಿಸಲಾಗಿದೆ. ಗಣೇಶ ಚತುರ್ಥಿ ಹಬ್ಬದ ಬಳಿಕ ಮಳೆ ತೀವ್ರಗೊಳ್ಳುವ ನಿರೀಕ್ಷೆಯಿದೆ.
ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಉಳಿದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa