ದೌರ್ಜನ್ಯ ಪ್ರಕರಣಗಳ ತ್ವರಿತ ವಿಲೇವಾರಿಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, 25 ಆಗಸ್ಟ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನ ಸೌಧ ಸಭಾಂಗಣದಲ್ಲಿ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳ ನಿರ್ವಹಣೆ ಮತ
Meeting


ಬೆಂಗಳೂರು, 25 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನ ಸೌಧ ಸಭಾಂಗಣದಲ್ಲಿ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.

ಸಭೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳ ನಿರ್ವಹಣೆ ಮತ್ತು ನ್ಯಾಯ ಒದಗಿಸುವ ಬಗೆಗೆ ಹಲವು ಪ್ರಮುಖ ನಿರ್ಧಾರಗಳು ಕೈಗೊಳ್ಳಲಾಯಿತು.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂತಹ ಪ್ರಕರಣಗಳಲ್ಲಿ 60 ದಿನಗಳೊಳಗಾಗಿ ಆರೋಪಪಟ್ಟಿ ಸಲ್ಲಿಕೆ ಕಡ್ಡಾಯ ಎಂದು ಸ್ಪಷ್ಟ ಸೂಚನೆ ನೀಡಿದರು.

ಕಳೆದ ಆರು ತಿಂಗಳಲ್ಲಿ ಶೇ.84 ಪ್ರಕರಣಗಳಲ್ಲಿ ಮಾತ್ರ ನಿಗದಿತ ಅವಧಿಯೊಳಗೆ ಆರೋಪಪಟ್ಟಿ ಸಲ್ಲಿಕೆ ನಡೆದಿದ್ದು, ಮುಂದೆ ಶೇ.100 ಪ್ರಕರಣಗಳಲ್ಲಿಯೂ ನಿಗದಿತ ಅವಧಿ ಪಾಲನೆ ಆಗಬೇಕು ಎಂದು ಅವರು ಆದೇಶಿಸಿದರು.

ಪೊಲೀಸರು ಯಾವುದೇ ನೆಪ ಹೇಳಬಾರದು ಎಂದು ಎಚ್ಚರಿಸಿದ ಅವರು, ನ್ಯಾಯಾಲಯದಲ್ಲಿ ತಡೆಯಾಜ್ಞೆ ಬಾಕಿ ಇರುವ 56 ಪ್ರಕರಣಗಳನ್ನು ತೆರವುಗೊಳಿಸಲು ಕೂಡಾ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ ರಾಜ್ಯದಲ್ಲಿ 11 ವಿಶೇಷ ನ್ಯಾಯಾಲಯಗಳು ಸ್ಥಾಪನೆಯಾಗಿದ್ದು, ನ್ಯಾಯಾಲಯಗಳಲ್ಲಿ ವಿಚಾರಣೆ ವೇಗವಾಗಿ ಸಾಗುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದನ್ನು ಹೆಚ್ಚಿಸಲು ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದರು. ಆರೋಪಿಗಳೊಂದಿಗೆ ಪೊಲೀಸರ ನಂಟು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜೊತೆಗೆ, ದೌರ್ಜನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande