ಒಳ ಮೀಸಲಾತಿ : ಅಲೆಮಾರಿಗಳಿಗೆ ಶೇ. 1 ರಷ್ಟು ಮೀಸಲಾತಿಗೆ ಆಗ್ರಹ
ಬಳ್ಳಾರಿ, 25 ಆಗಸ್ಟ್ (ಹಿ.ಸ.) : ಆ್ಯಂಕರ್ : ನ್ಯಾಯಮೂರ್ತಿ ಡಾ. ಹೆಚ್. ನಾಗಮೋಹನದಾಸ್ ಏಕ ಸದಸ್ಯ ಆಯೋಗದ ವರದಿಯ ಪ್ರಕಾರ 59 ಸೂಕ್ಷ್ಮ ಮತ್ತು ಅಲೆಮಾರಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ ರಲ್ಲಿ ಇರಿಸಿ ಶೇ. 1 ರಷ್ಟು ಒಳ ಮೀಸಲಾತಿ ನೀಡಲು ಆಗ್ರಹಿಸಿ ಅಲೆಮಾರಿ ಸಮುದಾಯ ನಗರದಲ್ಲಿ ಸೋಮವಾರ ಬೃಹ
ಒಳ ಮೀಸಲಾತಿ : ಅಲೆಮಾರಿಗಳಿಗೆ ಶೇ. 1 ರಷ್ಟು ಮೀಸಲಾತಿಗೆ ಆಗ್ರಹ


ಒಳ ಮೀಸಲಾತಿ : ಅಲೆಮಾರಿಗಳಿಗೆ ಶೇ. 1 ರಷ್ಟು ಮೀಸಲಾತಿಗೆ ಆಗ್ರಹ


ಬಳ್ಳಾರಿ, 25 ಆಗಸ್ಟ್ (ಹಿ.ಸ.) :

ಆ್ಯಂಕರ್ : ನ್ಯಾಯಮೂರ್ತಿ ಡಾ. ಹೆಚ್. ನಾಗಮೋಹನದಾಸ್ ಏಕ ಸದಸ್ಯ ಆಯೋಗದ ವರದಿಯ ಪ್ರಕಾರ 59 ಸೂಕ್ಷ್ಮ ಮತ್ತು ಅಲೆಮಾರಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ ರಲ್ಲಿ ಇರಿಸಿ ಶೇ. 1 ರಷ್ಟು ಒಳ ಮೀಸಲಾತಿ ನೀಡಲು ಆಗ್ರಹಿಸಿ ಅಲೆಮಾರಿ ಸಮುದಾಯ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಅಲೆಮಾರಿ, ಅರೆ ಅಲೆಮಾರಿ ಸಂಘದ ಜಿಲ್ಲಾಧ್ಯಕ್ಷ ವೈ. ಶಿವಕುಮಾರ್,

ಒಳ ಮೀಸಲಾತಿಯನ್ನು ಜಾರಿ ಮಾಡುವ ಒತ್ತಡದಲ್ಲಿರುವ ಕರ್ನಾಟಕ ಸರ್ಕಾರವು 101 ಪರಿಶಿಷ್ಟ ಜಾತಿಗಳಿಗೆ ಸೂಕ್ತ

ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಮೀಸಲು ಪ್ರಮಾಣವನ್ನು ಸಾಮಾಜಿಕ ನ್ಯಾಯದಡಿ ನಿಗದಿ ಮಾಡಿಲ್ಲ. ಒಳ ಮೀಸಲಾತಿಯು ಅಲೆಮಾರಿ, ಅರೆ ಅಲೆಮಾರಿಗಳಿಗೆ ಮರಣ ಶಾಸನದಂತಿದೆ ಎಂದರು.

ಪ್ರಜಾ ಪರಿವರ್ತನೆ ವೇದಿಕೆಯ ಜಿಲ್ಲಾಧ್ಯಕ್ಷ ಸಿ. ಅನಂತಕುಮಾರ್ ಅವರು, ಅಲೆಮಾರಿಗಳನ್ನು ಬಂಜಾರ, ಬೋವಿ, ಕೊರಮ ಕೊರಚ ಸಮುದಾಯಗಳ ಜೊತೆಗೆ ಸೇರಿಸಿ ಶೇ. 5% ರಷ್ಟು ಮೀಸಲಾತಿಯನ್ನು ನಿಗದಿ ಮಾಡಿರುವುದು ಮರಣ ಶಾಸನವಾಗಿದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು.

ಪ್ರತಿಭನೆಯಲ್ಲಿ ಅಲೆಮಾರಿ ಸಮುದಾಯದ ಮುಖಂಡರಾದ ಕಂಡಪ್ಪ ಕಟ್ಟಿಮನಿ, ದುಗ್ಲಪ್ಪ, ಗಾಳೆಪ್ಪ, ರಾಮಾಂಜನಿ, ಸುಬ್ಬಯ್ಯ, ಗಂಗಾಧರ, ಮಹೇಶ್, ಶಂಕ್ರಪ್ಪ, ರಂಗಯ್ಯ, ಸೇರಿ ಅಲೆಮಾರಿ ಅಲೆಮಾರಿ ಸಮುದಾಯದ ನೂರಾರು ಜನ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande