ಸೆ.7ರವರೆಗೆ ಆಧಾರ್ ಸೀಡಿಂಗ್ ಅಭಿಯಾನ
ರಾಯಚೂರು, 26 ಆಗಸ್ಟ್ (ಹಿ.ಸ.) : ಆ್ಯಂಕರ್ : ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದೇ ಬಾಕಿ ಇರುವ ಅರ್ಜಿಗಳಿಗೆ ಆಧಾರ್ ಸೀಡಿಂಗ್ ಮಾಡುವ ಕಾರ್ಯವನ್ನು ಪೂರ್ಣಗೊಳಿಸಲು ಆಧಾರ್ ಸೀಡಿಂಗ
ಸೆ.7ರವರೆಗೆ ಆಧಾರ್ ಸೀಡಿಂಗ್ ಅಭಿಯಾನ


ರಾಯಚೂರು, 26 ಆಗಸ್ಟ್ (ಹಿ.ಸ.) :

ಆ್ಯಂಕರ್ : ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದೇ ಬಾಕಿ ಇರುವ ಅರ್ಜಿಗಳಿಗೆ ಆಧಾರ್ ಸೀಡಿಂಗ್ ಮಾಡುವ ಕಾರ್ಯವನ್ನು ಪೂರ್ಣಗೊಳಿಸಲು ಆಧಾರ್ ಸೀಡಿಂಗ್ ಅಭಿಯಾನವನ್ನು ಸೆಪ್ಟೆಂಬರ್ 7ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಆಧಾರ್ ಸೀಡಿಂಗ್ ಆಗದೇ ಇರುವ ಕೆಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರಿಗೆ ತಾಂತ್ರಿಕ ಅಡೆತಡೆ ಉಂಟಾಗಿರುವ ಹಿನ್ನಲೆಯಲ್ಲಿ ಎಲ್ಲಾ ಅರ್ಹ ವಿದ್ಯಾರ್ಥಿಗಳು ಆಧಾರ್ ಸೀಡಿಂಗ್ ಮಾಡಿಸಿಕೊಳ್ಳುವಂತಾಗಿಸಲು ವಿಶೇಷ ಆಧಾರ್ ಸೀಡಿಂಗ್ ಅಭಿಯಾನವನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ.

ಸೂಚನೆಗಳು: ಆಧಾರ್ ಸೀಡಿಂಗ್ ಆಗದೇ ಇರುವ ವಿದ್ಯಾರ್ಥಿಗಳ ಪಟ್ಟಿಯನ್ನು ತಾಲೂಕು ಎಸ್.ಎಸ್.ಪಿ. ಲಾಗಿನ್‍ನಲ್ಲಿ ಪಡೆದು ಆಯಾ ಶಾಲಾ ಹಾಗೂ ಕಾಲೇಜುಗಳ ಪ್ರಕಾರ ವಿಂಗಡಿಸಿ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ವ್ಯಾಪಕ ಜಾಗೃತಿ ಮೂಡಿಸುವಿಕೆಯ ಸಲುವಾಗಿ ಹಾಸ್ಟೇಲ್ ವಾರ್ಡನ್ ಹಾಗೂ ಇಲಾಖೆಯ ಸಿಬ್ಬಂದಿಯ ಸಹಕಾರದೊಂದಿಗೆ ಆಧಾರ್ ಸೀಡಿಂಗ್ ಆಗದೇ ಇರುವ ವಿದ್ಯಾರ್ಥಿಗಳ ಶಾಲಾ ಹಾಗೂ ಕಾಲೇಜುಗಳಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳುಬೇಕು. ಜಿಲ್ಲೆ ಹಾಗೂ ತಾಲೂಕುನಲ್ಲಿ ಆಧಾರ್ ಸೀಡಿಂಗ್ ಆಗದೇ ಇರುವ ಎಲ್ಲಾ ಅರ್ಜಿಗಳನ್ನು www.npci.org.in ನ ತಂತ್ರಾಂಶದ ಮೂಲಕ ಖಚಿತಪಡಿಸಿಕೊಂಡು ಸೀಡಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಸಂಬಂಧಿಸಿದ ಶಾಲಾ ಹಾಗೂ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಜಿಲ್ಲೆಯ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 08532-220045, 9535828236 ಅಥವಾ ತಾಲೂಕಾ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande