ಬಿಕ್ಲು ಶಿವ ಹತ್ಯೆ ಪ್ರಕರಣ : ಎ1 ಆರೋಪಿ ಜಗ್ಗ ಸಿಐಡಿ ವಶಕ್ಕೆ
ಬೆಂಗಳೂರು, 26 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎ1 ಆರೋಪಿ ಜಗದೀಶ್ ಅಲಿಯಾಸ್‌ ಜಗ್ಗನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿಯಲ್ಲಿ ಲುಕ್‌ಔಟ್‌ ನೋಟಿಸ್‌ ಆಧಾರದಲ್ಲಿ ಏರ್‌ಪೋರ್ಟ್‌ನಲ್ಲಿ ಜಗ್ಗನನ್ನು ವಶಕ್
ಬಿಕ್ಲು ಶಿವ ಹತ್ಯೆ ಪ್ರಕರಣ : ಎ1 ಆರೋಪಿ ಜಗ್ಗ ಸಿಐಡಿ ವಶಕ್ಕೆ


ಬೆಂಗಳೂರು, 26 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಲ್ಲಿ ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎ1 ಆರೋಪಿ ಜಗದೀಶ್ ಅಲಿಯಾಸ್‌ ಜಗ್ಗನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ದೆಹಲಿಯಲ್ಲಿ ಲುಕ್‌ಔಟ್‌ ನೋಟಿಸ್‌ ಆಧಾರದಲ್ಲಿ ಏರ್‌ಪೋರ್ಟ್‌ನಲ್ಲಿ ಜಗ್ಗನನ್ನು ವಶಕ್ಕೆ ಪಡೆದಿದ್ದು, ಸದ್ಯ ಸಿಐಡಿ ಕಚೇರಿಗೆ ಕರೆತರಲಾಗುತ್ತಿದೆ.

ಜಗ್ಗನ ಪತ್ತೆಗೆ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಪೊಲೀಸರು ಶೋಧ ನಡೆಸಿದ್ದರು.

ಈ ಪ್ರಕರಣದಲ್ಲಿ ಈಗಾಗಲೇ 21 ಮಂದಿಯನ್ನು ಬಂಧಿಸಲಾಗಿದೆ. ಜುಲೈ 15ರಂದು ಬಿಕ್ಲು ಶಿವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದು, ಶಿವನ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande