ಗದಗ, 26 ಆಗಸ್ಟ್ (ಹಿ.ಸ.) :
ಆ್ಯಂಕರ್ : ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯ ಯಾವತ್ತೂ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವ ಹಾಗೂ ಮಾಂಸ ಮಾರಾಟಗಾರರಿಗೆ ತಿಳಿಯಪಡಿಸುವುದೇನೆಂದರೆ ಶ್ರೀ ಗಣೇಶ ಚತುರ್ಥಿ ಅಂಗವಾಗಿ ಅಗಸ್ಟ 27 ರಂದು ಜಾನುವಾರುಗಳ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಮಾಂಸ ಮಾರಾಟ ಮಾಡುವದಾಗಲಿ ಹಾಗೂ ಜಾನುವಾರುಗಳನ್ನು ವಧೆ ಮಾಡದಿರಲು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಥವರ ಲೈಸನ್ಸನ್ನು ರದ್ದು ಮಾಡಲಾಗುವುದು ಎಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP