ಬೆಂಗಳೂರು, 26 ಆಗಸ್ಟ್ (ಹಿ.ಸ.) :
ಆ್ಯಂಕರ್ : ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಜೆಡಿಎಸ್ ಎಕ್ಸ್‌ನಲ್ಲಿ ತೀವ್ರ ಟೀಕೆ ನಡೆಸಿದೆ.
ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ ಎಂದು ಲೇವಡಿ ಮಾಡಿದೆ.
ಕಾಂಗ್ರೆಸ್ ಹೈಕಮಾಂಡ್‌ಗೆ ತಲೆಬಾಗಿದ ಶಿವಕುಮಾರ್, ಅಧಿಕಾರ ಉಳಿಸಿಕೊಳ್ಳಲು ಮಂಡಿಯೂರಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.
ಇದೇ ವೇಳೆ, ಹಿಂದೆಯೇ ಒಬ್ಬ ದಲಿತ ಸಮುದಾಯದ ಸಚಿವರನ್ನು ವಜಾ ಮಾಡುವಾಗ ಕ್ಷಮೆ ಕೇಳುವ ಅವಕಾಶವೂ ಕೊಡಲಾಗಿರಲಿಲ್ಲ. ಕಾಂಗ್ರೆಸ್‌ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ ಎಂದು ಜೆಡಿಎಸ್ ಹೈಕಮಾಂಡ್ ನೀತಿಯನ್ನು ಕಟುವಾಗಿ ಟೀಕಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa