ಕೊಪ್ಪಳ, 26 ಆಗಸ್ಟ್ (ಹಿ.ಸ.) :
ಆ್ಯಂಕರ್ : ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡದ (ಎಸ್‍ಟಿ) ಜನಾಂಗದ ಏಳಿಗೆಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಕ್ಟೋಬರ್ 7 ರಂದು ನಡೆಯುವ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ಯಲಬುರ್ಗಾ ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಗಂಗಾವತಿ ಮತ್ತು ಕುಷ್ಟಗಿ ಕಚೇರಿಗಳಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್