ನವದೆಹಲಿ, 26 ಆಗಸ್ಟ್ (ಹಿ.ಸ.) :
ಆ್ಯಂಕರ್ : ದೆಹಲಿಯ ದರ್ಯಗಂಜ್‌ನಲ್ಲಿ ಆಗಸ್ಟ್ 20ರಂದು ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಮೂವರು ಬಿಹಾರ ಮೂಲದ ವಲಸೆ ಕಾರ್ಮಿಕರು ಸಾವನ್ನಪ್ಪಿದ ಘಟನೆ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್ ಜಾರಿ ಮಾಡಿದೆ.
ಆಯೋಗವು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತ ಹಾಗೂ ಕೇಂದ್ರ ದೆಹಲಿಯ ಪೊಲೀಸ್ ಉಪ ಆಯುಕ್ತರಿಗೆ ನೋಟಿಸ್ ಕಳುಹಿಸಿ, ಎರಡು ವಾರಗಳಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿದೆ.
ಘಟನೆ ವೇಳೆ ಸ್ಥಳದಲ್ಲಿ 15 ಕಾರ್ಮಿಕರು ಇದ್ದರೆಂದು ತಿಳಿದುಬಂದಿದ್ದು, ಕಟ್ಟಡದ ಮಾಲೀಕರು ಮತ್ತು ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa