ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ
ರಾಯಚೂರು, 26 ಆಗಸ್ಟ್ (ಹಿ.ಸ.) : ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್-2025ರ 2ನೇ ತಾರೀಖಿನೊಂದು ನಡಯಲಿ
ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ


ರಾಯಚೂರು, 26 ಆಗಸ್ಟ್ (ಹಿ.ಸ.) :

ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಕ್ಟೋಬರ್-2025ರ 2ನೇ ತಾರೀಖಿನೊಂದು ನಡಯಲಿರುವ ಪ್ರವರ್ತನಾ ದಿನಕ್ಕೆ ನಾಗಪುರ ದೀಕ್ಷಾ ಭೂಮಿಗೆ ಕಳುಹಿಸುವ ಸಂಬಂಧ ಜಿಲ್ಲಾವಾರು ರಾಜ್ಯದ ಒಟ್ಟು 7,700 ಅರ್ಹ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಿ ಕೆ.ಎಸ್.ಆರ್.ಟಿ.ಸಿ, ಇತರೆ ಸಾರಿಗೆ ಬಸ್ ಹಾಗೂ ರೈಲಿನ ಮೂಲಕ ಕಳುಹಿಸಲು ಆದೇಶಿಸಲಾಗಿದ್ದು, ಸೆಪ್ಟೆಂಬರ್ 30ರಿಂದ ಅಕ್ಟೋಬರ್ 04ರವರೆಗೆ ರಾಯಚೂರು ಜಿಲ್ಲೆಯಿಂದ ಪ್ರಯಾಣಿಸಲು ಹಾಗೂ ಹಿಂದಿರುಗಿ ಬರುವ ಸಂಬಂಧ ಬಸ್ ಮತ್ತು ರೈಲಿನ ಮೂಲಕ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.

ಆಸಕ್ತ ಯಾತ್ರಾರ್ಥಿಗಳು ಇಲಾಖೆಯ ವೆಬ್‍ಸೈಟ್ ವಿಳಾಸ: https://swd.karnataka.gov.in/website ನಲ್ಲಿ ಸೆಪ್ಟೆಂಬರ್ 9ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರಾಯಚೂರಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande