ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧಿಕೃತ ಚಾಲನೆ
ಬೆಂಗಳೂರು, 26 ಆಗಸ್ಟ್ (ಹಿ.ಸ.) : ಆ್ಯಂಕರ್ : ಭಾರಿ ಚರ್ಚೆಗೆ ಕಾರಣವಾಗಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಇದೀಗ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ರಾಜ್ಯ ಸರ್ಕಾರ ಇಂದು ಪ್ರಾಧಿಕಾರಕ್ಕೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದನಿಮಿತ್ತ ಸದಸ್ಯರ ನೇಮಕಾತಿಯನ್ನು ಪ್ರಕಟಿಸಿದೆ. ಮುಖ್ಯಮಂತ್ರಿ ಸ
ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧಿಕೃತ ಚಾಲನೆ


ಬೆಂಗಳೂರು, 26 ಆಗಸ್ಟ್ (ಹಿ.ಸ.) :

ಆ್ಯಂಕರ್ : ಭಾರಿ ಚರ್ಚೆಗೆ ಕಾರಣವಾಗಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಇದೀಗ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ರಾಜ್ಯ ಸರ್ಕಾರ ಇಂದು ಪ್ರಾಧಿಕಾರಕ್ಕೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದನಿಮಿತ್ತ ಸದಸ್ಯರ ನೇಮಕಾತಿಯನ್ನು ಪ್ರಕಟಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಬಿಎ ಅಧ್ಯಕ್ಷರನ್ನಾಗಿ ಹಾಗೂ ಉಪಮುಖ್ಯಮಂತ್ರಿ ಮತ್ತು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದೇ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಂಗಳೂರಿನ ಸಚಿವರು, ಸಂಸದರು, ವಿಧಾನಸಭಾ ಹಾಗೂ ವಿಧಾನ ಪರಿಷತ್ ಸದಸ್ಯರು ಸಹ ಪ್ರಾಧಿಕಾರದ ಪದನಿಮಿತ್ತ ಸದಸ್ಯರಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸದಸ್ಯತ್ವ ನೀಡಲಾಗಿದೆ. ಜಿಬಿಎ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಮೇಯರ್‌ಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯ ಕಾರ್ಯದರ್ಶಿಗಳು ಹಾಗೂ ಇತರರು ಸೇರಿ ಒಟ್ಟು 75 ಸದಸ್ಯರನ್ನೊಳಗೊಂಡ ಬೃಹತ್ ಮಂಡಳಿಯನ್ನು ರಚಿಸಲಾಗಿದೆ.

ಈ ಪ್ರಾಧಿಕಾರದ ಕಚೇರಿ ಎನ್.ಆರ್.ಚೌಕದಲ್ಲಿರುವ ಹಾಲಿ ಬಿಬಿಎಂಪಿ ಆಡಳಿತಾಧಿಕಾರಿಗಳ ಕಚೇರಿಯಲ್ಲೇ ಕಾರ್ಯನಿರ್ವಹಿಸಲಿದೆ.

ಐದು ಹೊಸ ಪಾಲಿಕೆಗಳು

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024ರ ಪ್ರಕಾರ ಬಿಬಿಎಂಪಿ ವ್ಯಾಪ್ತಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶವೆಂದು ಘೋಷಿಸಿ, ಅದರೊಳಗೆ ಐದು ಮಹಾನಗರ ಪಾಲಿಕೆಗಳನ್ನು ರಚಿಸಲಾಗಿದೆ.

ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ, ಬೆಂಗಳೂರು ಉತ್ತರ ಮಹಾನಗರ ಪಾಲಿಕೆ, ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ, ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ, ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ

ಈ ಕಾಯ್ದೆ 2025ರ ಮೇ 15ರಿಂದ ಜಾರಿಗೆ ಬಂದಿದ್ದು, ಜುಲೈ 19ರಂದು ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಸಾರ್ವಜನಿಕರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಸ್ವೀಕರಿಸಲು ಆಗಸ್ಟ್ 18ರವರೆಗೂ ಅವಕಾಶ ನೀಡಲಾಗಿತ್ತು.

ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನ ಆಡಳಿತವನ್ನು ಹೊಸ ರೂಪದಲ್ಲಿ ಜಿಬಿಎ ಮೇಲ್ವಿಚಾರಣೆಯಡಿಯಲ್ಲಿ ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande