ಪ್ರತಿ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಸುದರ್ಶನ್ ರೆಡ್ಡಿ ಲಕ್ನೋ ಭೇಟಿ
ಲಕ್ನೋ, 26 ಆಗಸ್ಟ್ (ಹಿ.ಸ.) : ಆ್ಯಂಕರ್ : ಪ್ರತಿ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಉತ್ತರ ಪ್ರದೇಶದ ಲಕ್ನೋಗೆ ಭೇಟಿ ನೀಡಿದ್ದಾರೆ. ಲಕ್ನೋ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಕಾರ್ಯಕರ್ತರು ಅವರಿಗೆ ಭವ್ಯ ಸ್ವಾಗತ ಕೋರಿದರು. ಈ ವೇಳೆ, ಕಾ
Sudarshana


ಲಕ್ನೋ, 26 ಆಗಸ್ಟ್ (ಹಿ.ಸ.) :

ಆ್ಯಂಕರ್ : ಪ್ರತಿ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಉತ್ತರ ಪ್ರದೇಶದ ಲಕ್ನೋಗೆ ಭೇಟಿ ನೀಡಿದ್ದಾರೆ. ಲಕ್ನೋ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಕಾರ್ಯಕರ್ತರು ಅವರಿಗೆ ಭವ್ಯ ಸ್ವಾಗತ ಕೋರಿದರು.

ಈ ವೇಳೆ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ, ಹಿರಿಯ ನಾಯಕ ಹಾಗೂ ರಾಜ್ಯ ಸಭಾ ಸಂಸದ ಪ್ರಮೋದ್ ತಿವಾರಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಸುದರ್ಶನ್ ರೆಡ್ಡಿ ಅವರು ಇಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಚೇರಿಯಲ್ಲಿ ಜನ ಪ್ರತಿನಿಧಿಗಳನ್ನು ಭೇಟಿ ಮಾಡಿ ಬೆಂಬಲ ಸಂಗ್ರಹಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande