ರಾಯಚೂರು, 26 ಆಗಸ್ಟ್ (ಹಿ.ಸ.) :
ಆ್ಯಂಕರ್ : ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳಿಗೆ ಜಿಲ್ಲಾ ಆಯ್ಕೆ ಸಮಿತಿಯಿಂದ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಅಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಳದೊಡ್ಡಿಯ ಅಂಗನವಾಡಿ ಕೇಂದ್ರ 02ರಲ್ಲಿ ಕಾರ್ಯಕರ್ತೆ ಹುದ್ದೆಗೆ ಕು.ಶ್ರಾವಣಿ ತಂದೆ ಲಕ್ಷ್ಮಣ್, ಯರಗುಂಟಾ ಅಂಗನವಾಡಿ 02ರಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕು.ತಾಹೇರ ತಂದೆ ಅಬ್ದುಲ್ ನಜೀರ್, ರಾಮನಗರ ಅಂಗನವಾಡಿ ಕೇಂದ್ರ 02ರಲ್ಲಿ ಅಂಗನವಾಡಿ ಸಹಾಯಕಿ ಹುದ್ದೆಗೆ ಕವಿತಾ ಗಂಡ ವಿಶಾಲ್, ಜನತಾ ಕಾಲೋನಿ ಅಂಗನವಾಡಿ ಕೇಂದ್ರ 01ರಲ್ಲಿ ಅಂಗನವಾಡಿ ಸಹಾಯಕಿ ಹುದ್ದೆಗೆ ಗಂಗಮ್ಮ ಗಂಡ ಶ್ರೀ ಜಸ್ಟೀನ್, ಕಲವಲದೊಡ್ಡಿ ಅಂಗನವಾಡಿ 02ರಲ್ಲಿ ಅಂಗನವಾಡಿ ಸಹಾಯಕಿ ಹುದ್ದೆಗೆ ಮಹಾದೇವಿ ಗಂಡ ಶ್ರೀ ನಾಗರಾಜ್, ಯರಗುಂಟಾ ಅಂಗನವಾಡಿ ಕೇಂದ್ರ 02ರಲ್ಲಿ ಅಂಗನವಾಡಿ ಸಹಾಯಕಿ ಕು.ಪಾರ್ವತಿ ತಂದೆ ಯಲ್ಲಪ್ಪ ಇವರನ್ನು ತಾತ್ಕಾಲಿಕವಾಗಿ ಮಾಡಲಾಗಿದ್ದು, ಈ ತಾತ್ಕಾಲಿಕ ಆಯ್ಕೆಪಟ್ಟಿಗೆ ಅಕ್ಷೇಪಣೆ ಅರ್ಜಿ ಸಲ್ಲಿಸುವವರು ಸೂಕ್ತ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 4ರ ಸಂಜೆ 5.30ರೊಳಗೆ ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳು ರಾಯಚೂರು ಅವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಕ್ಷೇಪಣೆ ಸಲ್ಲಿಸುವವರು ಆಕ್ಷೇಪಣೆ ಅರ್ಜಿಯ ಜೊತೆಗೆ ಯಾವುದೇ ದಾಖಲಾತಿಗಳು ಸಲ್ಲಿಸದಿದ್ದಲ್ಲಿ ಅಂತಹವರ ಆಕ್ಷೇಪಣೆ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಾರ್ಯಾಲಯ ರಾಯಚೂರು ಅವರನ್ನು ಸಂಪರ್ಕಿಸುವಂತೆ ರಾಯಚೂರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್