ಮಂಗಳೂರು, 26 ಆಗಸ್ಟ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಯಲ್ಲಿ ವಿಶೇಷ ತನಿಖಾ ತಂಡ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆ ಮೇಲೆ ದಾಳಿ ನಡೆಸಿ ಸಿಸಿಟಿವಿ ಹಾರ್ಡ್‌ಡಿಸ್ಕ್ ಹಾಗೂ ಆರೋಪಿ ಚಿನ್ನಯ್ಯ ಬಳಸುತ್ತಿದ್ದ ಮೊಬೈಲ್ ಫೋನ್ ವಶಪಡಿಸಿಕೊಂಡಿದೆ.
ಚಿನ್ನಯ್ಯನನ್ನು ಸ್ಥಳಕ್ಕೆ ಕರೆದುಕೊಂಡು ಬಂದು ಮಹಜರು ನಡೆಸಲಾಯಿತು. ತಿಮರೋಡಿ ಮನೆಯಲ್ಲಿ ತಂಡದ ಸದಸ್ಯರು ತಂಗಿ ಪ್ಲ್ಯಾನ್ ಮಾಡುತ್ತಿದ್ದರು ಎಂಬ ಶಂಕೆ ಹಿನ್ನೆಲೆಯಲ್ಲಿ ಸಿಸಿಟಿವಿ ಡಿವಿಆರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುರುಡೆ ಗ್ಯಾಂಗ್ ತಮ್ಮ ಪರ ಪ್ರಚಾರಕ್ಕಾಗಿ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳನ್ನು ತಿಮರೋಡಿ ಮನೆಯಲ್ಲಿ ತಂಗಿಸಿದ್ದು, ಇವರ ವಿಚಾರಣೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa