ರಾಯಚೂರು, 26 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಸಿರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವ್ಯಾಪ್ತಿಯಲ್ಲಿ ಅಂಗನವಾಡಿ ಸಹಾಯಕಿಯರ ಖಾಲಿ ಹುದ್ದೆಗಳಿಗೆ ಜಿಲ್ಲಾ ಆಯ್ಕೆ ಸಮಿತಿಯಿಂದ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸಿರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವ್ಯಾಪ್ತಿಯ ಬಾಗಲವಾಡ ಅಂಗನವಾಡಿ ಕೇಂದ್ರ 8ರಲ್ಲಿ ಸಹಾಯಕಿರ 1 ಹುದ್ದೆಗೆ ಶಿವಲೀಲಾ ತಂದೆ ಮಹಾಂತೇಶ್ ಅವರನ್ನು ತಾತ್ಕಾಲಿಕವಾಗಿ ಮಾಡಲಾಗಿದ್ದು, ಈ ತಾತ್ಕಾಲಿಕ ಆಯ್ಕೆಪಟ್ಟಿಗೆ ಅಕ್ಷೇಪಣೆ ಅರ್ಜಿ ಸಲ್ಲಿಸುವವರು ಸೂಕ್ತ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 1ರ ಸಂಜೆ 5.30ರೊಳಗೆ ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳು ಸಿರವಾರ ಅವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಕ್ಷೇಪಣೆ ಸಲ್ಲಿಸುವವರು ಆಕ್ಷೇಪಣೆ ಅರ್ಜಿಯ ಜೊತೆಗೆ ಯಾವುದೇ ದಾಖಲಾತಿಗಳು ಸಲ್ಲಿಸದಿದ್ದಲ್ಲಿ ಅಂತಹವರ ಅಕ್ಷೇಪಣೆ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಾರ್ಯಾಲಯ ಸಿರವಾರ ಅವರನ್ನು ಸಂಪರ್ಕಿಸುವಂತೆ ಸಿರವಾರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್