ಬಳ್ಳಾರಿ, 26 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾ ಕೇಂದ್ರದಲ್ಲಿ ಸೆಪ್ಟಂಬರ್ 07 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಸೆಪ್ಟಂಬರ್ 17 ರಂದು ವಿಶ್ವಕರ್ಮ ಜಯಂತಿ ಆಚರಣೆ ಕುರಿತಂತೆ ಚರ್ಚಿಸಲು ಆಗಸ್ಟ್ 28 ರಂದು ಬೆಳಿಗ್ಗೆ 11.30 ಗಂಟೆಗೆ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಿದೆ.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಅಧ್ಯಕ್ಷತೆ ವಹಿಸುವರು. ಸಭೆಗೆ ಸಂಬಂಧಿಸಿದ ಇಲಾಖಾಧಿಕಾರಿಗಳು, ಸಮಾಜದ ಮುಖಂಡರು ತಪ್ಪದೇ ಭಾಗವಹಿಸಿ, ಮಹನೀಯರ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಸಲಹೆ ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್