ಕೊಪ್ಪಳ, 26 ಆಗಸ್ಟ್ (ಹಿ.ಸ.) :
ಆ್ಯಂಕರ್ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ 2 ದಿನಗಳ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ರೈತರು, ರೈತ ಮಹಿಳೆಯರು ತರಬೇತಿಯಲ್ಲಿ ಭಾಗವಹಿಸಬಹುದು.
ಪಶು ಆಸ್ಪತ್ರೆ ಆವರಣದಲ್ಲಿರುವ ಕೊಪ್ಪಳ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಸ್ಟ್ 29 ಮತ್ತು 30 ರಂದು ತರಬೇತಿಯನ್ನು ನೀಡಲಾಗುತ್ತದೆ.
ತರಬೇತಿಗೆ ಆಗಮಿಸುವವರಿಗೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಪಾಸ್‍ಪೋರ್ಟ್ ಅಳತೆಯ 2 ಭಾವಚಿತ್ರಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ತರಬೇಕು.
ಹೆಚ್ಚಿನ ವಿವರಗಳಿಗಾಗಿ ಹತ್ತಿರದ ಪಶು ಚಿಕತ್ಸಾ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಈ ತರಬೇತಿಯು ಕೊಪ್ಪಳ ಜಿಲ್ಲೆಯ ರೈತರಿಗೆ ಮಾತ್ರ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್