ವಿಜಯಪುರ, 26 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಹಯೋಗದೊಂದಿಗೆ 2025-26ನೇ ಸಾಲಿನ ವಿಜಯಪುರ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಆಗಸ್ಟ್ 29ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಜಯಪುರ ತಾಲೂಕಾ ಮಟ್ಟದ ದಸರಾ ಕ್ರೀಡಾ ಕೂಟವನ್ನು ಅಂದು ಬೆಳಿಗ್ಗೆ 10 ಗಂಟೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟನೆ ನೆರವೇರಿಸಲಿದ್ದು, ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ,ವಿಧಾನ ಪರಿಷತ್ತಿನ ಪ್ರತಿ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ.ಎನ್,ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಹಾಗೂ ಶಾಸಕರಾದ ಪ್ರಕಾಶ ಹುಕ್ಕೇರಿ,ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರೂ ಆದ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಅಧಿಕಾರಿಗಳು ಹಾಗೂ ಸಂಘ-ಸ0ಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ಈ ಕ್ರೀಡಾ ಕೂಟದಲ್ಲಿ ಅಥ್ಲೇಟಿಕ್, ವಾಲಿಬಾಲ್, ಫುಟಬಾಲ್, ಖೋಖೋ, ಕಬ್ಬಡಿ, ಥ್ರೋಬಾಲ್ ಹಾಗೂ ಯೋಗ ಸ್ಪರ್ಧೆಗಳು ಜರುಗಲಿವೆ ಎಂದು ಕ್ರೀಡಾಧಿಕಾರಿ ರಾಜಶೇಜರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande