ವಿಶ್ವಕರ್ಮ ಜಯಂತಿ : ಪೂರ್ವಭಾವಿ ಸಿದ್ಧತಾ ಸಭೆ
ರಾಯಚೂರು, 26 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತದಿಂದ ಜಿಲ್ಲಾ ಕೇಂದ್ರದಲ್ಲಿ ಸೆ.17ರಂದು ಆಚರಿಸಲಾಗುವ ವಿಶ್ವಕರ್ಮ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಭಜಂತ್ರಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆಗಸ್ಟ್ 26ರ ಮಂಗಳವಾರ ದಂದು ನಗರದ
ವಿಶ್ವಕರ್ಮ ಜಯಂತಿ : ಪೂರ್ವಭಾವಿ ಸಿದ್ಧತಾ ಸಭೆ


ವಿಶ್ವಕರ್ಮ ಜಯಂತಿ : ಪೂರ್ವಭಾವಿ ಸಿದ್ಧತಾ ಸಭೆ


ರಾಯಚೂರು, 26 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತದಿಂದ ಜಿಲ್ಲಾ ಕೇಂದ್ರದಲ್ಲಿ ಸೆ.17ರಂದು ಆಚರಿಸಲಾಗುವ ವಿಶ್ವಕರ್ಮ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಭಜಂತ್ರಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಆಗಸ್ಟ್ 26ರ ಮಂಗಳವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲ ತಾಲೂಕು ಸರ್ಕಾರಿ ಕಚೇರಿಗಳು, ಗ್ರಾಮ ಪಂಚಾಯಿತಿಗಳಲ್ಲಿ, ಶಾಲಾ-ಕಾಲೇಜುಗಳು ಹಾಗೂ ವಸತಿ ನಿಲಯಗಳಲ್ಲಿ ವಿಶ್ವಕರ್ಮ ಜಯಂತಿಯನ್ನು ಕಡ್ಡಾಯವಾಗಿ ಆಚರಣೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ನಾನಾ ಕಾರ್ಯಸಿದ್ಧತೆಗೆ ಅಗತ್ಯ ಕ್ರಮ ವಹಿಸಬೇಕು. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂದು ಜಿಲ್ಲಾ ಕೇಂದ್ರದಲ್ಲಿ ಸೆ.17ರ ಬೆಳಗ್ಗೆ 09 ಗಂಟೆಗೆ ನಗರದ ಆಕಾಶವಾಣಿ ಕೇಂದ್ರದ ಹತ್ತಿರವಿರುವ ವಿಶ್ವಕರ್ಮ ವೃತ್ತದಿಂದ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮೆರವಣಿಗೆ ಸಾಗುವ ಮಾರ್ಗ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಮಹಾನಗರ ಪಾಲಿಕೆಯಿಂದ ಕಲ್ಪಿಸಬೇಕು ಎಂದರು.

ಜಯಂತಿ ಕಾರ್ಯಕ್ರಮದ ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಪೂಜೆಗೆ ಹೂವು-ಹಾರಗಳ ವ್ಯವಸ್ಥೆ ಮಾಡಬೇಕು. ಪೆÇಲೀಸ್ ಇಲಾಖೆಯಿಂದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಬೇಕು. ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರ ಆಹ್ವಾನಕ್ಕೆ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವೇದಿಕೆ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಅವರ ಕುರಿತು ಉಪನ್ಯಾಸ ನೀಡಲು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ.ಅಮೃತಾ ಎಸ್.ಬೆನ್ನಾಳ ಅವರಿಗೆ ಆಹ್ವಾನಿಸಲು ನಿರ್ಣಯಿಸಲಾಯಿತು.

ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಎಲ್ಲರೂ ಅನುಕೂಲ ಮಾಡಿಕೊಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸಮಾಜದ ಮುಖಂಡರಲ್ಲಿ ಕೋರಿದರು.

ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉತ್ತರಾದೇವಿ, ಎಇಇಯಾದ ಈರಣ್ಣ ಬಡಿಗೇರ, ಹಿರಿಯ ಪತ್ರಕರ್ತ ಮಾರುತಿ ಬಡಿಗೇರ್, ಸಮಾಜದ ಮುಖಂಡರಾದ ಬ್ರಹ್ಮ ಗಣೇಶ ವಕೀಲರು, ಕೆ.ರಾಮು ಗಾಣಧಾಳ, ಬಾಬಣ್ಣ, ಎ.ಈಶ್ವರ ವಿಶ್ವಕರ್ಮ, ಮನೋಹರ ಬಡಿಗೇರ, ವೆಂಕಟೇಶ ಅನ್ವರಿ, ಕುಂಡಾಪುರ ವೆಂಕಟೇಶ, ಬ್ರಹ್ಮಯ್ಯ, ಎ.ಶ್ರೀನಿವಾಸ್ ಬಡಿಗೇರ್, ಜಯಂತ್ ಆಚಾರಿ, ಡಾ.ರವಿ ಮಸ್ಕಿ, ಮೌನೇಶ, ಕೆ.ಪ್ರಾಣೇಶ್, ನರಸಪ್ಪ ಕಂಬಾರ, ಅನಂತಶಯ, ರಘು, ಶ್ರೀಕಾಂತ್, ರವಿ ಸೇರಿದಂತೆ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಸಭೆಯಲ್ಲಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande