ಧಾರವಾಡ, 27 ಆಗಸ್ಟ್ (ಹಿ.ಸ.):
ಆ್ಯಂಕರ್:ಧಾರವಾಡ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ 2025–26 ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ಎಲ್ಲಾ ಕೋರ್ಸುಗಳಿಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 15, 2025 ರೊಳಗಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ಅಧಿಕೃತ ಜಾಲತಾಣ https://shp.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa