ವಿಜಯಪುರ, 27 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 15ರಂದು ಕೊನೆಯ ದಿನವಾಗಿದೆ.
ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ ಆವರಣ, ದೂರವಾಣಿ ಸಂಖ್ಯೆ:08352-796060 ಅಥವಾ ವೆಬ್ ಸೈಟ್ www.dwdsc.kar.nic.in ಗೆ ಸಂಪರ್ಕಿಸುವAತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande