ಚಾಮುಂಡೇಶ್ವರಿ ವಿವಾದ: ಡಿ.ಕೆ.ಶಿವಕುಮಾರ್ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
ನವದೆಹಲಿ, 27 ಆಗಸ್ಟ್ (ಹಿ.ಸ.): ಆ್ಯಂಕರ್: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಮುಂಡೇಶ್ವರಿ ಹಿಂದೂಗಳ ಆಸ್ತಿ ಅಲ್ಲ ಎಂಬ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, “ರಾಜ
ಚಾಮುಂಡೇಶ್ವರಿ ವಿವಾದ: ಡಿ.ಕೆ.ಶಿವಕುಮಾರ್ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ


ನವದೆಹಲಿ, 27 ಆಗಸ್ಟ್ (ಹಿ.ಸ.):

ಆ್ಯಂಕರ್:

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಮುಂಡೇಶ್ವರಿ ಹಿಂದೂಗಳ ಆಸ್ತಿ ಅಲ್ಲ ಎಂಬ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, “ರಾಜ್ಯದಲ್ಲಿ 3,500ಕ್ಕೂ ಹೆಚ್ಚು ದೇವಸ್ಥಾನಗಳು ಮುಜುರಾಯಿ ಇಲಾಖೆಯ ಆಸ್ತಿ. ಮುಜುರಾಯಿ ಆಸ್ತಿ ಎಂದರೆ ಅದು ಹಿಂದೂಗಳ ಆಸ್ತಿ. ಹಾಗಿದ್ದರೂ ಡಿ.ಕೆ.ಶಿವಕುಮಾರ್ ಅವರು ಚಾಮುಂಡೇಶ್ವರಿ ಹಿಂದೂಗಳ ಆಸ್ತಿ ಅಲ್ಲ ಎಂದು ಹೇಳಿರುವುದು ಹಿಂದೂಗಳಿಗೆ ಮಾಡಿದ ಅವಮಾನ ಎಂದು ಕಿಡಿಕಾರಿದರು.

ನವರಾತ್ರಿ ದೇವಿಯ ಒಂಭತ್ತು ಅವತಾರಗಳ ಆರಾಧನೆ. ಮೈಸೂರು ರಾಜರು ಇದನ್ನು ವಿಜೃಂಭಣೆಯಿಂದ ನಡೆಸುತ್ತಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಈಗ ಚಾಮುಂಡೇಶ್ವರಿ ದೇವಿಯ ಮೇಲೆ ನಂಬಿಕೆ ಇಲ್ಲದವರಿಂದಲೇ ದಸರಾ ಉದ್ಘಾಟನೆ ಮಾಡಿಸುತ್ತಿದೆ. ಇದು ಹಿಂದೂ ವಿರೋಧಿ ನಿಲುವು ಎಂದು ಆರೋಪಿಸಿದರು.

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿ ಅಲ್ಲ ಎಂದರೆ ಅದು ಯಾರ ಆಸ್ತಿ? ಟಿಪ್ಪು ಆಡಳಿತ ನಡೆಸಿದ ಕಾರಣಕ್ಕೆ ವಕ್ಫ್ ಆಸ್ತಿ ಎಂದು ಘೋಷಿಸಬೇಕೇ? ಹಿಂದೆಯೇ ಹಲವಾರು ರೈತರ ಜಮೀನು ವಕ್ಫ್ ಆಸ್ತಿಯೆಂದು ಘೋಷಿಸಲಾಗಿತ್ತು. ಇದೇ ರೀತಿಯ ಯೋಜನೆ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಧಾರ್ಮಿಕ ನಂಬಿಕೆಗಳಿಂದಲೂ, ಸಾಂಸ್ಕೃತಿಕ ಮೌಲ್ಯಗಳಿಂದಲೂ ದಿವಾಳಿಯಾಗಿದ್ದಾರೆ. ಹೈಕಮಾಂಡ್ ಮೆಚ್ಚಿಸಲು ಹಿಂದೂ ವಿರೋಧಿ ಮನಸ್ಥಿತಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ದೇವರು ಈ ಮನಸ್ಥಿತಿಯವರಿಗೆ ಪಾಠ ಕಲಿಸುತ್ತಾನೆ ಎಂದು ಕಿಡಿಕಾರಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande