ಡಾ. ಎಂ. ಎಂ. ಕಲಬುರ್ಗಿ ಅವರ 10ನೇ ಹುತಾತ್ಮ ದಿನಾಚರಣೆ
ಧಾರವಾಡ, 27 ಆಗಸ್ಟ್ (ಹಿ.ಸ.): ಆ್ಯಂಕರ್:ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಸೇವೆ ಸಲ್ಲಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತರಾದ ಡಾ. ಎಂ. ಎಂ. ಕಲಬುರ್ಗಿ ಅವರ 10ನೇ ಹುತಾತ್ಮ ದಿನಾಚರಣೆ ಅಂಗವಾಗಿ ಕರ್ನಾಟಕ ಸರ್ಕಾರದ ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ವಿಶೇಷ
ಡಾ. ಎಂ. ಎಂ. ಕಲಬುರ್ಗಿ ಅವರ 10ನೇ ಹುತಾತ್ಮ ದಿನಾಚರಣೆ


ಧಾರವಾಡ, 27 ಆಗಸ್ಟ್ (ಹಿ.ಸ.):

ಆ್ಯಂಕರ್:ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಸೇವೆ ಸಲ್ಲಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತರಾದ ಡಾ. ಎಂ. ಎಂ. ಕಲಬುರ್ಗಿ ಅವರ 10ನೇ ಹುತಾತ್ಮ ದಿನಾಚರಣೆ ಅಂಗವಾಗಿ ಕರ್ನಾಟಕ ಸರ್ಕಾರದ ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ವಿಶೇಷ ಉಪನ್ಯಾಸ, ಗ್ರಂಥ ಬಿಡುಗಡೆ ಹಾಗೂ ವಚನ ಗಾಯನ ಕಾರ್ಯಕ್ರಮವನ್ನು ಆಗಸ್ಟ್ 30, 2025 ರಂದು ಸಂಜೆ 5 ಗಂಟೆಗೆ ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಾಂಸ್ಕ್ರತಿಕ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ ಅಧ್ಯಕ್ಷತೆ ವಹಿಸುವರು. ಉಮಾದೇವಿ ಎಂ. ಕಲಬುರ್ಗಿ ಹಾಗೂ ಎಂ. ಎ. ಅರುಣ್ ಉಪಸ್ಥಿತರಿರುವರು.

ಈ ಕಾರ್ಯಕ್ರಮಕ್ಕೆ ಸಂಶೋಧಕರು, ಸಾಹಿತಿಗಳು, ವಿದ್ಯಾರ್ಥಿಗಳು, ಗಣ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿಗಳು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande