ಶಿವಮೊಗ್ಗ, 27 ಆಗಸ್ಟ್ (ಹಿ.ಸ.):
ಆ್ಯಂಕರ್:
ಭಾರತ್ ಕೆರಿಯರ್ ಕನೆಕ್ಟ್ ಸೊಲ್ಯೂಶನ್ಸ್ ಸಹಯೋಗದಲ್ಲಿ ಅಪೋಲೊ ಮೆಡ್ ಸ್ಕಿಲ್ಸ್ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 6 ತಿಂಗಳ ಉಚಿತ ಜನರಲ್ ಡ್ಯೂಟಿ ಅಸಿಸ್ಟೆಂಟ್ ತರಬೇತಿ ಬೆಂಗಳೂರಿನಲ್ಲಿ ನೀಡಲಾಗುತ್ತದೆ.
ತರಬೇತಿಗೆ ಅರ್ಜಿ ಸಲ್ಲಿಸುವವರು 18 ರಿಂದ 30 ವರ್ಷದೊಳಗಿನವರು ಆಗಿರಬೇಕು ಹಾಗೂ ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ತರಬೇತಿ ಪೂರ್ಣಗೊಳಿಸಿದ ನಂತರ ಆಸ್ಪತ್ರೆಗಳು, ವೃದ್ಧಾಶ್ರಮಗಳು ಹಾಗೂ ಹಿರಿಯರ ಆರೈಕೆ ಕೇಂದ್ರಗಳಲ್ಲಿ ಉದ್ಯೋಗಾವಕಾಶ ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ 953560288, 6362902311, 6362902335 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಭಾರತ್ ಕೆರಿಯರ್ ಕನೆಕ್ಟ್ ಸೊಲ್ಯೂಶನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa