ರಾಜ್ಯದಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ
ಬೆಂಗಳೂರು, 27 ಆಗಸ್ಟ್ (ಹಿ.ಸ.) : ಆ್ಯಂಕರ್ : ರಾಜ್ಯದಾದ್ಯಂತ ಇಂದು ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಹಬ್ಬದ ಸಂಭ್ರಮ ವಿಶೇಷ ಕಳೆಗಟ್ಟಿದ್ದು, ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆಗಳು ನಡೆಯುತ್ತಿವೆ. ನ
Ganesh


ಬೆಂಗಳೂರು, 27 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದು ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ.

ರಾಜಧಾನಿ ಬೆಂಗಳೂರಿನಲ್ಲಿ ಹಬ್ಬದ ಸಂಭ್ರಮ ವಿಶೇಷ ಕಳೆಗಟ್ಟಿದ್ದು, ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆಗಳು ನಡೆಯುತ್ತಿವೆ.

ನೂರಾರು ಸಂಖ್ಯೆಯಲ್ಲಿ ಭಕ್ತರು ಮುಂಜಾನೆಯೇ ದೇವಸ್ಥಾನದತ್ತ ಆಗಮಿಸಿ ಗಣಪತಿ ದರ್ಶನ ಪಡೆಯುತ್ತಿದ್ದಾರೆ.

ಪ್ರತಿ ವರ್ಷ ಭಾದ್ರಪದ ಮಾಸದ ಶುಕ್ಲಪಕ್ಷದ ಚತುರ್ಥಿಯ ದಿನ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತದೆ.

ಬೆಳ್ಳಿ ಅಥವಾ ಮಣ್ಣಿನಿಂದ ತಯಾರಿಸಿದ ಗಣಪತಿಯ ಮೂರ್ತಿಗೆ ವಿಧಿ-ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ, ವ್ರತಾಚರಣೆ ಮಾಡುವುದು ಸಂಪ್ರದಾಯವಾಗಿದೆ.

ನಾಡಿನಾದ್ಯಂತ ಗಣೇಶೋತ್ಸವದ ಹರ್ಷೋಲ್ಲಾಸ ಮನೆಮಾತಾಗಿದ್ದು, ಹುಬ್ಬಳ್ಳಿಯ ರಾಣಿ ಚನ್ನಮ್ಮ (ಈದ್ಗಾ) ಮೈದಾನದಲ್ಲೂ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಜರುಗಲಿದೆ. ಮಧ್ಯಾಹ್ನ 12 ಗಂಟೆಗೆ ಕೃಷ್ಣಾವತಾರಿ ಗಣೇಶ ಮೂರ್ತಿಯನ್ನು ವಿಜೃಂಭಣೆಯಿಂದ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande