ವಿಜಯಪುರ, 27 ಆಗಸ್ಟ್ (ಹಿ.ಸ.):
ಆ್ಯಂಕರ್: ಗಣೇಶ ಚತುರ್ಥಿ ಸಂಭ್ರಮ ವಿಜಯಪುರ ಜಿಲ್ಲೆಯಲ್ಲಿ ಆರಂಭವಾಗಿದೆ. ನಗರದ ವಿವಿಧೆಡೆ ಬಗೆಬಗೆಯ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳು ಕಲಾವಿದರ ಕೈಯಲ್ಲಿ ಸುಂದರವಾಗಿ ಅರಳಿವೆ. ವಿಘ್ನ ನಿವಾರಕನ ಆಗಮನದಿಂದ ಜನತೆ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಇದೆಲ್ಲದರ ಮಧ್ಯೆ ಪಿಒಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಮೂರ್ತಿಗಳಿಗೆ ನಿಷೇಧವಿದ್ದರೂ ಮಾರಾಟ ನಡೆದಿದೆ. ಜಿಲ್ಲೆಯಲ್ಲಿ ಮಣ್ಣಿನ ಗಣೇಶ ಮೂರ್ತಿ ಬೇಡಿಕೆ ಹೆಚ್ಚಾಗಿದ್ದರಿಂದ ಬೇರೆ ಜಿಲ್ಲೆಗಳಿಂದ ಸಾವಿರಾರು ಗಣೇಶ ಮೂರ್ತಿಗಳ ಮಾರಾಟ ಆಗಿವೆ.
ಇನ್ನೂ ಮಣ್ಣಿನಿಂದ ತಯಾರಿಸಿದ ಗಣಪತಿ ಮೂರ್ತಿಗಳ ಖರೀದಿಗೆ ಜನರು ಹೆಚ್ಚು ಉತ್ಸುಕರಾಗಿದ್ದಾರೆ. ಹೀಗಾಗಿ ಸಾವಿರಾರು ಜನ ಮೂರ್ತಿಗಳಿಗೆ ಮುಂಗಡ ಹಣ ನೀಡಿ ಬುಕ್ ಮಾಡಿ, ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಜತೆಗೆ, ತಯಾರಕರು ಅರ್ಧ ಅಡಿಯಿಂದ ಹಿಡಿದು ಆರು ಅಡಿ ಎತ್ತರದವರೆಗಿನ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಹೆಚ್ಚು ಮಾರಾಟವಾಗಿವೆ. ಒಂದೊಂದು ಮೂರ್ತಿಯೂ ವಿಭಿನ್ನ ಶೈಲಿಯೊಂದಿಗೆ ನೋಡುಗರನ್ನು ಆಕರ್ಷಿಸುತ್ತಿವೆ. ಈಗಾಗಲೇ ಬಡಾವಣೆಗಳಲ್ಲೂ ವಿವಿಧ ಸಂಘ-ಸಂಸ್ಥೆಗಳು ಹಾಗೂ ಯುವಕರ ಗುಂಪುಗಳು ಗಣೇಶ ಹಬ್ಬ ಆಚರಣೆಗೆ ಸಂಭ್ರಮ ಹೆಚ್ಚಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande