ಬೆಂಗಳೂರು, 27 ಆಗಸ್ಟ್ (ಹಿ.ಸ.):
ಆ್ಯಂಕರ್:ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಬಿಡುವು ನೀಡಿದ್ದ ಮಳೆ ಇಂದು ಗಣೇಶ ಹಬ್ಬದಂದು ಮತ್ತೆ ಸುರಿದಿದೆ.
ನಗರದ ಶಾಂತಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ, ಕೆಆರ್ ಮಾರ್ಕೆಟ್, ಲಾಲ್ ಬಾಗ್, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಮಳೆಯಿಂದಾಗಿ ಗುಂಡಿಗಳಲ್ಲಿ ನೀರು ನಿಂತು ರಸ್ತೆಗಳು ಕೆರೆಗಳಾಗಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸಿದರು.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಮುಂದಿನ 48 ಗಂಟೆಗಳವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಆಗಾಗ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa