ಶಿವಮೊಗ್ಗ, 27 ಆಗಸ್ಟ್ (ಹಿ.ಸ.):
ಆ್ಯಂಕರ್:ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ನಿ., (ಹಾಪ್‌ಕಾಮ್ಸ್)ದ ಚುನಾವಣೆಯು ಅಕ್ಟೋಬರ್ 26 ರಂದು ನಡೆಯಲಿದ್ದು, ಕರಡು ಮತದಾರರ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಅ.03 ರ ಸಂಜೆ 4.30 ರೊಳಗೆ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಲಿಖಿತ ದೂರಿನ ಮೂಲಕ ಸಲ್ಲಿಸಬಹುದೆಂದು ಹಾಪ್‌ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa