ಜಮ್ಮು, 27 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಮ್ಮು-ಕಾಶ್ಮೀರದ ಕಟ್ರಾದ ವೈಷ್ಣೋ ದೇವಿ ದೇವಸ್ಥಾನದ ಮಾರ್ಗದಲ್ಲಿ ಭಾರಿ ಮಳೆಯಿಂದ ಉಂಟಾದ ಭೂಕುಸಿತದಲ್ಲಿ 32 ಮಂದಿ ಮೃತಪಟ್ಟಿದ್ದಾರೆ. ಘಟನೆ ಅಧ್ಕ್ವಾರಿ ಗುಹಾ ದೇವಸ್ಥಾನದ ಬಳಿ ಇರುವ ಇಂದ್ರಪ್ರಸ್ಥ ಭೋಜನಾಲಯದ ಬಳಿ ನಡೆದಿದೆ.
ರಕ್ಷಣಾ ಕಾರ್ಯ ತೀವ್ರಗೊಳಿಸಲಾಗಿದ್ದು, ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಚಕ್ಕಿ ನದಿಯಲ್ಲಿ ಹಠಾತ್ ಪ್ರವಾಹದಿಂದ ರೈಲು ಸಂಚಾರ ಅಸ್ತವ್ಯಸ್ತಗೊಂಡಿದ್ದು, 18 ರೈಲುಗಳನ್ನು ರದ್ದುಗೊಳಿಸಲಾಗಿದೆ.
ಘಟನೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪರಾಜ್ಯಪಾಲ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಪ್ರತಿಕ್ರಿಯೆ ನೀಡಿ, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ತಕ್ಷಣ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa