ರಾಯಚೂರು, 27 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಯಚೂರಿನ ಮುನ್ನೂರು ಕಾಪು ಸಮಾಜ, ಗಂಜ್, ಯರಮರಸ್, ಚಂದ್ರ ಮೌಳೇಶ್ವರ ಗಜಾನನ ಮಂಡಳಿ ಸೇರಿ ಮಂಡಳಿ ಹಾಗೂ ವೀರಾಂಜನೇಯ ದೇವಸ್ಥಾನ ಗಜಾನನ ಮಂಡಳಿ ವತಿಯಿಂದ ಗಣೇಶ ವಿಗ್ರಹಗಳ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ಭಾಗವಹಿಸಿ ವಿಜ್ಞ ವಿನಾಯಕ, ಶ್ರೀ ಗಜಾನನ ಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಹಾ ಮಂಗಳಾರತಿ ಮಾಡಿ ನಾಡಿನ ಸಮಸ್ತ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.
ನಾಡಿನ ಸಮಸ್ತ ಜನತೆಗೆ ವಿಘ್ನ ವಿನಾಯಕನಾದ ಶ್ರೀ ಗಣೇಶನ ಆಶೀರ್ವಾದವಿರಲಿ. ಎಲ್ಲರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿರಿಯರಾದ ಜಯಣ್ಣ, ಕೆ ಶಾಂತಪ್ಪ, ಕಾಂಗ್ರೆಸ್ ಮುಖಂಡರಾದ ಮೊಹ್ಮದ್ ಶಾಲಂ, ಜಿ ಶಿವಮೂರ್ತಿ, ಅಮರಡಗೌಡ ಹಂಚಿನಾಳ, ರುದ್ರಪ್ಪ ಅಂಗಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ ರಡ್ಡಿ, ಬಸವರಾಜ ಪಾಟೀಲ್, ವಿಜಯರಾಜ ರೆಡ್ಡಿ, ಗೋವಿಂದ ರೆಡ್ಡಿ, ಪ್ರವೀಣ್ ಪೊಗಲ್, ಪ್ರತಾಪ್ ರಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್