ಫಲಾನುಭವಿ ಆಧಾರಿತ ಯೋಜನೆಯಡಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
ವಿಜಯಪುರ, 27 ಆಗಸ್ಟ್ (ಹಿ.ಸ.) : ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 13 ಫಲಾನುಭವಿ ಆಧಾರಿತ ಯೋಜನೆಗಳನ್ನು 2025-26ನೇ ಸಾಲಿನಲ್ಲಿ ಸೇವಾಸಿಂಧು, ಗ್ರಾಮಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸಿಟಿಜೆನ್ಸ್ ಫೋರ್ಟಲ್ ಆನ್‌ಲೈನ್ ತಂತ್ರಾ0ಶದಡಿ ಅಳವಡಿಸಲಾಗಿದ್ದು, ಈ ಯೋಜನೆಯಡಿ
ಫಲಾನುಭವಿ ಆಧಾರಿತ ಯೋಜನೆಯಡಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ


ವಿಜಯಪುರ, 27 ಆಗಸ್ಟ್ (ಹಿ.ಸ.) :

ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 13 ಫಲಾನುಭವಿ ಆಧಾರಿತ ಯೋಜನೆಗಳನ್ನು 2025-26ನೇ ಸಾಲಿನಲ್ಲಿ ಸೇವಾಸಿಂಧು, ಗ್ರಾಮಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸಿಟಿಜೆನ್ಸ್ ಫೋರ್ಟಲ್ ಆನ್‌ಲೈನ್ ತಂತ್ರಾ0ಶದಡಿ ಅಳವಡಿಸಲಾಗಿದ್ದು, ಈ ಯೋಜನೆಯಡಿ ಸೌಲಭ್ಯ ಪಡೆಯಲು (https://sevasindhu.karnataka.gov.in/sevasindhu/Kannada) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆಯ 13 ಫಲಾನುಭವಿ ಆಧಾರಿತ ಆನ್‌ಲೈನ್ ವೇದಿಕೆಯಲ್ಲಿ ಅಳವಡಿಸಲಾಗಿರುವ ಪ್ರತಿಭಾವಂತ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ ಸೇರಿದಂತೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ: 30-09-2025 ಕೊನೆಯ ದಿನಾಂಕವಾಗಿದೆ.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ವಿವಿದ್ದೊದ್ದೇಶ ಪುನರ್ವಸತಿ ಕಾರ್ಯಕರ್ತರುಗಳಾದ ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮೊ:9606151149, ವಿಜಯಪುರ ತಾಲೂಕಿನ ರವಿ ರಾಠೋಡ ಮೊ: 9035553337, ಸಿಂದಗಿ ತಾಲೂಕಿನ ಮುತ್ತುರಾಜ ಸಾತಿಹಾಳ ಮೊ: 9980019635, ಬಸವನಬಾಗೇವಾಡಿ ತಾಲೂಕಿನ ಶಿವಲೀಲಾ ಬಿರಾದಾರ ಮೊ: 8722135660, ಇಂಡಿ ತಾಲೂಕಿನ ಪರಶುರಾಮ ಬೋಸಲೆ ಮೊ: 9972441464 ಹಾಗೂ ಮುದ್ದೇಬಿಹಾಳ ತಾಲೂಕಿನ ಎಸ್.ಕೆ.ಘಾಟಿ ಮೊ: 9740682979 ಸಂಖ್ಯೆಗೆ ಸಂಪರ್ಕಿಸುವ0ತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande