ನವದೆಹಲಿ, 27 ಆಗಸ್ಟ್ (ಹಿ.ಸ.):
ಆ್ಯಂಕರ್:ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಆರ್‌ಎಸ್‌ಎಸ್ ಪ್ರಾರ್ಥನಾ ಗೀತೆಯನ್ನು ಹಾಡಿದ ವಿಚಾರ ಈಗ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪಾಟೀಲ್, ಶಿವಕುಮಾರ್ ಅವರು ವಿವಾದ ಸೃಷ್ಟಿಸಿದರೂ, ನಂತರ ಸ್ಪಷ್ಟನೆ ನೀಡಿ ಕ್ಷಮೆ ಯಾಚಿಸಿದ್ದಾರೆ. ಪಕ್ಷದ ಅಧ್ಯಕ್ಷರೂ ಸಹ ಇದೊಂದು ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಹೀಗಾಗಿ ಮತ್ತೆ ಮತ್ತೆ ಇದರ ಬಗ್ಗೆ ಚರ್ಚಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa