ಶಿವಮೊಗ್ಗ, 27 ಆಗಸ್ಟ್ (ಹಿ.ಸ.):
ಆ್ಯಂಕರ್:ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮವನ್ನು ಉನ್ನತೀಕರಣ ಮತ್ತು ಪ್ರಚಾರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೆ. 27 ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ-2025 ಅಂಗವಾಗಿ ಆಯೋಜಿಸಿರುವ ವೀಡಿಯೋಗ್ರಾಫಿ, ಫೋಟೋಗ್ರಾಫಿ, ರೀಲ್ಸ್, ಲೋಗೋ ವಿನ್ಯಾಸ ಹಾಗೂ ಶಿವಮೊಗ್ಗ ಪ್ರವಾಸೋದ್ಯಮ ಟ್ಯಾಗ್ ಲೈನ್ ಸ್ಪರ್ಧೆಗಳ ನೋಂದಣಿ ದಿನಾಂಕವನ್ನು ಆ.30ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರೂ ಆಗಿರುವ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa