ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
ಶಿವಮೊಗ್ಗ, 27 ಆಗಸ್ಟ್ (ಹಿ.ಸ.): ಆ್ಯಂಕರ್:ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 2025-26 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 2 ಮತ್ತು 3 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕ್ರೀಡಾಕೂ
ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ


ಶಿವಮೊಗ್ಗ, 27 ಆಗಸ್ಟ್ (ಹಿ.ಸ.):

ಆ್ಯಂಕರ್:ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 2025-26 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 2 ಮತ್ತು 3 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಈ ಕ್ರೀಡಾಕೂಟದಲ್ಲಿ ಅಥ್ಲೇಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಖೋಖೋ, ಕಬಡ್ಡಿ, ಬಾಸ್ಕೆಟ್‌ಬಾಲ್, ಕುಸ್ತಿ, ಷಟಲ್ ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ ಸೇರಿದಂತೆ ಆಯ್ಕೆಯ ಕ್ರೀಡೆಗಳಾದ ಟೆನ್ನಿಸ್, ನೆಟ್‌ಬಾಲ್ ಮತ್ತು ಈಜು ಸ್ಪರ್ಧೆಗಳು ನಡೆಯಲಿವೆ.

ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವೈಯುಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ಕ್ರೀಡಾಪಟುಗಳಿಗೆ ಮಾತ್ರ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆ ದೊರೆಯಲಿದೆ.

ಅರ್ಹ ಕ್ರೀಡಾಪಟುಗಳು ತಮ್ಮ ಹೆಸರನ್ನು ಸೆಪ್ಟೆಂಬರ್ 1 ರೊಳಗಾಗಿ ಕಡ್ಡಾಯವಾಗಿ ಈ ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.. https://dasaracmcup-2025.etrpindia.com/KA-sports/

ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣಭತ್ಯೆ ಮತ್ತು ದಿನಭತ್ಯೆ ದೊರೆಯಲಿದ್ದು, ನೆಹರೂ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಂಡು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ತಾಲೂಕುಗಳಿಂದ ಬರುವ ವಿಜೇತರಿಗೆ ಶಿವಮೊಗ್ಗಕ್ಕೆ ಬಂದು-ಹೋಗುವ ಸಾಮಾನ್ಯ ಪ್ರಯಾಣಭತ್ಯೆ ನೀಡಲಾಗುತ್ತದೆ. ಜೊತೆಗೆ ಮಧ್ಯಾಹ್ನದ ಉಪಹಾರ ವ್ಯವಸ್ಥೆಯೂ ಕಲ್ಪಿಸಲಾಗಿದೆ.

ಟೆನ್ನಿಸ್, ನೆಟ್‌ಬಾಲ್ ಮತ್ತು ಈಜು ಕ್ರೀಡೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯ್ಕೆ ಸ್ಪರ್ಧೆಗಳ ರೂಪದಲ್ಲಿ ನಡೆಸಲಾಗುವುದು ಎಂದು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande