ಮೇಜರ್ ಧ್ಯಾನ್‌ಚಂದ್‌ರವರ ಜನ್ಮ ದಿನಾಚರಣೆ ಪ್ರಯುಕ್ತ ಕ್ರೀಡಾಕೂಟ
ಶಿವಮೊಗ್ಗ, 27 ಆಗಸ್ಟ್ (ಹಿ.ಸ.): ಆ್ಯಂಕರ್:ಮೇಜರ್ ಧ್ಯಾನ್‌ಚಂದ್‌ರವರ ಜನ್ಮ ದಿನಾಚರಣೆ ಪ್ರಯುಕ್ತ ಹಾಗೂ ರಾಷ್ಟೀಯ ಕ್ರೀಡಾ ದಿನದ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶಿವಮೊಗ್ಗದಲ್ಲಿ ಆ.29 ರಿಂದ 31 ರವರೆಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಆ.29 ರಂದ
ಮೇಜರ್ ಧ್ಯಾನ್‌ಚಂದ್‌ರವರ ಜನ್ಮ ದಿನಾಚರಣೆ ಪ್ರಯುಕ್ತ ಕ್ರೀಡಾಕೂಟ


ಶಿವಮೊಗ್ಗ, 27 ಆಗಸ್ಟ್ (ಹಿ.ಸ.):

ಆ್ಯಂಕರ್:ಮೇಜರ್ ಧ್ಯಾನ್‌ಚಂದ್‌ರವರ ಜನ್ಮ ದಿನಾಚರಣೆ ಪ್ರಯುಕ್ತ ಹಾಗೂ ರಾಷ್ಟೀಯ ಕ್ರೀಡಾ ದಿನದ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶಿವಮೊಗ್ಗದಲ್ಲಿ ಆ.29 ರಿಂದ 31 ರವರೆಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.

ಆ.29 ರಂದು ನೆಹರು ಕ್ರೀಡಾಂಗಣದಲ್ಲಿ ಬೆಳಿಗ್ಗೆ 8 ಗಂಟೆಗೆ ಹಾಕಿ ಪೆನಾಲ್ಟಿ ಶೂಟೌಟ್ ಹಾಗೂ ಸಂಜೆ 4.30 ಕ್ಕೆ ಹಗ್ಗಜಗ್ಗಾಟ ಕ್ರೀಡೆ ನಡೆಯಲಿದೆ. ಪುರುಷರು ಮತ್ತು ಮಹಿಳೆಯರು ಒಳಗೊಂಡಂತೆ ಹಾಕಿ ಪೆನಾಲ್ಟಿ ಶೂಟೌಟ್‌ಗೆ 6 ಮಂದಿ ಹಾಗೂ ಹಗ್ಗಜಗ್ಗಾಟಕ್ಕೆ 8 ಮಂದಿ ಸ್ಪರ್ಧಿಗಳು ಭಾಗವಹಿಸಬಹುದು. ಈ ಕ್ರೀಡೆಗೆ ಯಾವುದೇ ವಯಸ್ಸಿನ ನಿರ್ಬಂಧವಿಲ್ಲ.

ಆ.30 ರಂದು ಸಂಜೆ 10.30ಕ್ಕೆ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಚರ್ಚಾ ಸ್ಪರ್ಧೆ ಆಯೋಜಿಸಿದ್ದು, 16 ವರ್ಷ ಮೇಲ್ಪಟ್ಟ ಯುವಕ/ಯುವತಿಯರು ಭಾಗವಹಿಸಬಹುದು.

ಆ.31 ರಂದು ಬೆಳಿಗ್ಗೆ 6.30ಕ್ಕೆ ನೆಹರು ಕ್ರೀಡಾಂಗಣದಲ್ಲಿ ಸೈಕ್ಲೋಥಾನ್ ಹಾಗೂ ಬೆಳಗ್ಗೆ 10.30 ಕ್ಕೆ ಕ್ರೀಡಾ ಸಂಕೀರ್ಣ ಗೋಪಾಳದಲ್ಲಿ ಸಿಂಗಲ್ಸ್ ಮತ್ತು ಡಬಲ್ಸ್ ಟೇಬಲ್ ಟೆನ್ನಿಸ್ ಆಯೋಜಿಸಲಾಗಿದೆ. ಸೈಕ್ಲೋಥಾನ್‌ಗೆ 16 ವರ್ಷ ಮೇಲ್ಪಟ್ಟ ಯುವಕ/ಯುವತಿಯರು ಭಾಗವಹಿಸಲು ಅವಕಾಶವಿದೆ. ಹಾಗೂ ಪುರುಷ ಮತ್ತು ಮಹಿಳೆಯರಿಗೆ ಟೇಬಲ್ ಟೆನ್ನಿಸ್‌ನಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ಯಾವುದೇ ವಯಸ್ಸಿನ ನಿರ್ಬಂಧವಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:9845863549, 7619638472 ಗೆ ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande