ಗಣೇಶ ಚತುರ್ಥಿ ಸಂಭ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ, 27 ಆಗಸ್ಟ್ (ಹಿ.ಸ.): ಆ್ಯಂಕರ್:ಗಣೇಶ ಚತುರ್ಥಿಯ ಪವಿತ್ರ ಹಬ್ಬದ ಅಂಗವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಬುಧವಾರ ತಮ್ಮ ಹುಬ್ಬಳ್ಳಿಯ ನಿವಾಸದಲ್ಲಿ ಕುಟುಂಬ ಸಮೇತರಾಗಿ ಗಣಪತಿಯನ್ನು ಪ್ರತಿಷ್ಠಾಪಿಸಿ ಭಕ್ತಿ ಭಾವದಿಂದ ಪೂಜೆ ಸಲ್ಲಿಸಿದರು. ಶಾಸ್ತ್ರೋಕ್ತ ವಿಧಿ ವಿಧಾನಗಳೊಂದಿಗೆ ಗಣಪತಿಗೆ
Joshi


ಹುಬ್ಬಳ್ಳಿ, 27 ಆಗಸ್ಟ್ (ಹಿ.ಸ.):

ಆ್ಯಂಕರ್:ಗಣೇಶ ಚತುರ್ಥಿಯ ಪವಿತ್ರ ಹಬ್ಬದ ಅಂಗವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಬುಧವಾರ ತಮ್ಮ ಹುಬ್ಬಳ್ಳಿಯ ನಿವಾಸದಲ್ಲಿ ಕುಟುಂಬ ಸಮೇತರಾಗಿ ಗಣಪತಿಯನ್ನು ಪ್ರತಿಷ್ಠಾಪಿಸಿ ಭಕ್ತಿ ಭಾವದಿಂದ ಪೂಜೆ ಸಲ್ಲಿಸಿದರು.

ಶಾಸ್ತ್ರೋಕ್ತ ವಿಧಿ ವಿಧಾನಗಳೊಂದಿಗೆ ಗಣಪತಿಗೆ ಅಲಂಕಾರ ಮಾಡಿ, ಶ್ಲೋಕ ಪಾರಾಯಣದ ಮಧ್ಯೆ ಕುಟುಂಬಸ್ಥರೊಂದಿಗೆ ಸಚಿವರು ಆರಾಧನೆ ನೆರವೇರಿಸಿದರು. ಈ ಸಂದರ್ಭದಲ್ಲಿ “ಗಣಪತಿ ಬಪ್ಪಾ ಮೋರಯಾ” ಎಂಬ ಘೋಷಣೆಗಳು ಮೊಳಗಿದವು.

ಪ್ರತಿ ವರ್ಷ ಸಂಭ್ರಮದಿಂದ ಆಚರಿಸಿಕೊಳ್ಳುವ ಈ ಹಬ್ಬದಲ್ಲಿ, ಗಣಪನ ಆರಾಧನೆಯ ಮೂಲಕ ಸಮಾಜದಲ್ಲಿ ಶಾಂತಿ, ಸಮೃದ್ಧಿ ಹಾಗೂ ಸೌಹಾರ್ದತೆ ನೆಲೆಸಲಿ ಎಂದು ಸಚಿವ ಜೋಶಿ ಹಾರೈಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande