ವೈಷ್ಣೋದೇವಿ ಯಾತ್ರೆ ಸ್ಥಗಿತ ; ಭೂಕುಸಿತದಿಂದ 10 ಸಾವು
ಜಮ್ಮು, 27 ಆಗಸ್ಟ್ (ಹಿ.ಸ.) : ಆ್ಯಂಕರ್ : ಮಂಗಳವಾರ ವೈಷ್ಣೋದೇವಿ ಮಾರ್ಗದಲ್ಲಿ ಸಂಭವಿಸಿದ ಭೂಕುಸಿತ ಮತ್ತು ಜಮ್ಮು-ಕಾಶ್ಮೀರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಇದುವರೆಗೆ 10 ಜನರು ಪ್ರಾಣ ಕಳೆದುಕೊಂಡಿದ್ದು, ಮೃತರ ಸಂಖ್ಯೆಯು ಇನ್ನಷ್ಟು ಹೆಚ್ಚಾಗುವ ಭೀತಿ ವ್ಯಕ್ತವಾಗಿದೆ. ಮೃತಪಟ್ಟವರಲ್ಲಿ ವೈಷ್ಣೋದೇವಿ ಯಾ
Land slide


ಜಮ್ಮು, 27 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮಂಗಳವಾರ ವೈಷ್ಣೋದೇವಿ ಮಾರ್ಗದಲ್ಲಿ ಸಂಭವಿಸಿದ ಭೂಕುಸಿತ ಮತ್ತು ಜಮ್ಮು-ಕಾಶ್ಮೀರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಇದುವರೆಗೆ 10 ಜನರು ಪ್ರಾಣ ಕಳೆದುಕೊಂಡಿದ್ದು, ಮೃತರ ಸಂಖ್ಯೆಯು ಇನ್ನಷ್ಟು ಹೆಚ್ಚಾಗುವ ಭೀತಿ ವ್ಯಕ್ತವಾಗಿದೆ. ಮೃತಪಟ್ಟವರಲ್ಲಿ ವೈಷ್ಣೋದೇವಿ ಯಾತ್ರೆಯಲ್ಲಿದ್ದ 6 ಭಕ್ತರು ಸೇರಿದ್ದಾರೆ.

ರಾಜ್ಯದಲ್ಲಿ ಭಾರಿ ಮಳೆಯಿಂದ ಅಪಾರ ನಷ್ಟ ಉಂಟಾಗಿದ್ದು, ಮುಖ್ಯಮಂತ್ರಿಗಳು ಒಮರ್ ಅಬ್ದುಲ್ಲಾ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಪರಿಸ್ಥಿತಿ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದು, ವೈಷ್ಣೋದೇವಿ ತೀರ್ಥಯಾತ್ರೆಯನ್ನು ಮುಂದೂಡಲಾಗಿದೆ.

ಕತ್ರಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೇನೆ ಮೂರು ಪರಿಹಾರ ದಳಗಳನ್ನು ನಿಯೋಜಿಸಿದ್ದು, ಜೀವ ಉಳಿಸುವ ಕಾರ್ಯ, ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande