ಬ್ರಹ್ಮಶ್ರೀ ನಾರಾಯಣಗುರು, ವಿಶ್ವಕರ್ಮ ಜಯಂತಿ ಆಚರಣೆಯ ಪೂರ್ವಭಾವಿ ಸಭೆ
ಬಳ್ಳಾರಿ, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ ವತಿಯಿಂದ ಮಹನೀಯರ ಜಯಂತಿಯ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಹೇಳಿದರು. ನಗರದ ಸಹಾಯಕ ಆಯುಕ್ತರ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು
ಬ್ರಹ್ಮಶ್ರೀ ನಾರಾಯಣಗುರು, ವಿಶ್ವಕರ್ಮ ಜಯಂತಿ ಆಚರಣೆಯ ಪೂರ್ವಭಾವಿ ಸಭೆ


ಬ್ರಹ್ಮಶ್ರೀ ನಾರಾಯಣಗುರು, ವಿಶ್ವಕರ್ಮ ಜಯಂತಿ ಆಚರಣೆಯ ಪೂರ್ವಭಾವಿ ಸಭೆ


ಬ್ರಹ್ಮಶ್ರೀ ನಾರಾಯಣಗುರು, ವಿಶ್ವಕರ್ಮ ಜಯಂತಿ ಆಚರಣೆಯ ಪೂರ್ವಭಾವಿ ಸಭೆ


ಬಳ್ಳಾರಿ, 28 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ ವತಿಯಿಂದ ಮಹನೀಯರ ಜಯಂತಿಯ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಹೇಳಿದರು.

ನಗರದ ಸಹಾಯಕ ಆಯುಕ್ತರ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆ.07 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಸೆ.17 ರಂದು ವಿಶ್ವಕರ್ಮ ಜಯಂತಿಯ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ಆಯೋಜಿಸಲಾಗುವುದು ಎಂದರು.

ಎಲ್ಲರೂ ಭಾಗವಹಿಸಿ ಆಚರಿಸಿದರೆ ಜಯಂತಿ ಕಾರ್ಯಕ್ರಮಗಳಿಗೆ ಮೆರಗು. ಹಾಗಾಗಿ ಎಲ್ಲ ಸಮುದಾಯದವರು, ಸಂಘ-ಸ0ಸ್ಥೆಗಳ ಮುಖಂಡರು, ಸಾರ್ವಜನಿಕರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಸೆ.07 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವಿದ್ದು, ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದ ಅವರು, ವೇದಿಕೆ ಮತ್ತು ಮೆರವಣಿಗೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಕೈಗೊಳ್ಳಬೇಕು ಎಂದು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸೆ.17 ರಂದು ವಿಶ್ವಕರ್ಮ ಜಯಂತಿ ಅಂಗವಾಗಿ ಮೆರವಣಿಗೆಯು ನಡೆಯಲಿದ್ದು, ಅಂದು ಬೆಳಿಗ್ಗೆ 09.30 ಗಂಟೆಗೆ ಕಾಳಿಕಾ ಕಮಠೇಶ್ವರ ದೇವಸ್ಥಾನದಿಂದ ಬೆಂಗಳೂರು ರಸ್ತೆ, ಹಳೇ ಬ್ರೂಸ್‌ಪೇಟೆ ಪೊಲೀಸ್ ಠಾಣೆ, ತೇರು ಬೀದಿ, ಹೆಚ್.ಆರ್.ಗವಿಯಪ್ಪ ವೃತ್ತದಿಂದ ಜೋಳದರಾಶಿ ದೊಡ್ಡನಗೌಡ ರಂಗಮ0ದಿರದ ವೇದಿಕೆ ಕಾರ್ಯಕ್ರಮದವರೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಒಳಗೊಂಡಿರುತ್ತವೆ ಎಂದು ಅವರು ತಿಳಿಸಿದರು.

ವೇದಿಕೆ ಕಾರ್ಯಕ್ರಮದಲ್ಲಿ ಸಂಗೀತ ಗಾಯನ, ಭಕ್ತಿಗೀತೆ ಕಾರ್ಯಕ್ರಮ ನಡೆಯಲಿದೆ. ಮಹನೀಯರ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು. ನಂತರದಲ್ಲಿ ಲಘು ಉಪಾಹಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಸಮುದಾಯದ ಮುಖಂಡರು ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ಹಾಗೂ ಯಶಸ್ವಿಗೊಳಿಸಲು ತಮ್ಮ ಅಭಿಪ್ರಾಯ ನೀಡಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಮಹಾನಗರ ಪಾಲಿಕೆ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande