ಬಳ್ಳಾರಿ, 28 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ಹಿಂದುಳಿದ ವರ್ಗಗಳ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆ ನೀಡಲು ಸೆ.01 ರ
ಸಂಜೆ 5.00 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ.
ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು.
ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು,ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ, ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ 080-29506668 ಗೆ ಸಂಪರ್ಕಿಸಬಹುದು .
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್