ರಾಯಚೂರಿನಲ್ಲಿ 13 ಸ್ವಯಂ ಪ್ರೇರಿತ ದೂರು ದಾಖಲಿಸಿದ ಉಪ ಲೋಕಾಯುಕ್ತ ಬಿ. ವೀರಪ್ಪ
ರಾಯಚೂರು, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ರಾಯಚೂರು ಪ್ರವಾಸದಲ್ಲಿರುವ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ ವೀರಪ್ಪ ಅವರು ಆಗಸ್ಟ್ 28ರಂದು ಕೈಗೊಂಡ ಅನಿರೀಕ್ಷಿತ ಭೇಟಿ ವೇಳೆ ಒಟ್ಟು 13 ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಅಧೀನದ ತರಕಾರಿ ಮಾರುಕಟ್ಟೆ, ಕರ್ನಾ
ರಾಯಚೂರಿನಲ್ಲಿ 13 ಸ್ವಯಂ ಪ್ರೇರಿತ ದೂರು ದಾಖಲಿಸಿದ ಉಪ ಲೋಕಾಯುಕ್ತ ಬಿ. ವೀರಪ್ಪ

ರಾಯಚೂರಿನಲ್ಲಿ 13 ಸ್ವಯಂ ಪ್ರೇರಿತ ದೂರು ದಾಖಲಿಸಿದ ಉಪ ಲೋಕಾಯುಕ್ತ ಬಿ. ವೀರಪ್ಪ

ರಾಯಚೂರಿನಲ್ಲಿ 13 ಸ್ವಯಂ ಪ್ರೇರಿತ ದೂರು ದಾಖಲಿಸಿದ ಉಪ ಲೋಕಾಯುಕ್ತ ಬಿ. ವೀರಪ್ಪ

ರಾಯಚೂರು, 28 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಾಯಚೂರು ಪ್ರವಾಸದಲ್ಲಿರುವ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ ವೀರಪ್ಪ ಅವರು ಆಗಸ್ಟ್ 28ರಂದು ಕೈಗೊಂಡ ಅನಿರೀಕ್ಷಿತ ಭೇಟಿ ವೇಳೆ ಒಟ್ಟು 13 ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಅಧೀನದ ತರಕಾರಿ ಮಾರುಕಟ್ಟೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧೀನದ ಕೈಗಾರಿಕಾ ಪ್ರದೇಶ, ಕೆಕೆಆರ್ ಟಿಸಿಯ ಕೇಂದ್ರ ಬಸ್ ನಿಲ್ದಾಣ,

ರಿಮ್ಸ್ ಆಸ್ಪತ್ರೆ, ರಾಯಚೂರು ತಾಲೂಕು ತಹಸೀಲ್ದಾರ ಕಚೇರಿ, ಎಡಿಎಲ್ಆರ್ ಕಚೇರಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಉಪ ನೋಂದಣಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ನಿರ್ಮಿತಿ ಕೇಂದ್ರ, ಗಣಿ‌ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗಳಿಗೆ ಭೇಟಿ ನೀಡಿ ಕಚೇರಿಗಳಲ್ಲಿನ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯಲೋಪದ ಬಗ್ಗೆ ಒಟ್ಟು 13 ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

 rajesh pande